Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:21 - ಕನ್ನಡ ಸತ್ಯವೇದವು J.V. (BSI)

21 ನೀವು ಕರ್ತನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾರಿರಿ; ಕರ್ತನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಧನಿಯಾಚ್ಯಾ ಆಯ್ದಾನಾತ್ಲೆ ಅನಿ ವಾಂಗ್ಡಾಚ್ ಮ್ಹಾರ್ವ್ವಾಚ್ಯಾಬಿ ಆಯ್ದಾನಾತ್ಲೆ ತುಮಿ ಫಿವ್ಕ್ ಹೊಯ್ನಾ, ಧನಿಯಾಚ್ಯಾಬಿ ಪಂಕ್ತಿತ್ ಅನಿ ಮ್ಹಾರ್ವಾಚ್ಯಾಬಿ ಪಂಕ್ತಿತ್ ಬಸುನ್ ತುಮ್ಕಾ ಜೆವಾನ್ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:21
8 ತಿಳಿವುಗಳ ಹೋಲಿಕೆ  

ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ - ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವದನ್ನು ಕಂಡು


ಆದರೆ ಯೆಹೋವನಾದ ನನ್ನನ್ನು ತೊರೆದು ನನ್ನ ಪವಿತ್ರಪರ್ವತವನ್ನು ಮರೆತು ಶುಭದಾಯಕದೇವತೆಗೆ ಔತಣವನ್ನು ಅಣಿಮಾಡಿ ಗತಿದಾಯಕದೇವತೆಗೆ ಮದ್ಯವನ್ನು ತುಂಬಾ ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗಮಾಡುವೆನು.


ನಾವು ದೇವಸ್ತೋತ್ರಮಾಡಿ ಪಾತ್ರೆಯಲ್ಲಿ ಪಾನಮಾಡುವದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬದನ್ನು ಸೂಚಿಸುತ್ತದಲ್ಲವೇ. ನಾವು ರೊಟ್ಟಿಯನ್ನು ಮುರಿದು ತಿನ್ನುವದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬದನ್ನು ಸೂಚಿಸುತ್ತದಲ್ಲವೇ.


ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲವಾದ ಮನಸ್ಸುಳ್ಳ ಸಹೋದರನು ಕಂಡರೆ ಅವನೂ ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೆ ಧೈರ್ಯತಂದುಕೊಂಡಾನಲ್ಲವೇ.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು