Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:28 - ಕನ್ನಡ ಸತ್ಯವೇದವು J.V. (BSI)

28 ಆದರೆ ಒಬ್ಬನು ನಿಮಗೆ - ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿವಿುತ್ತವಾಗಿಯೂ ಮನಸ್ಸಿನಲ್ಲಿ ಸಂಶಯಕ್ಕೆ ಸ್ಥಳಕೊಡಬಾರದೆಂಬ ಕಾರಣದಿಂದಲೂ ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಒಬ್ಬನು ನಿಮಗೆ, “ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖರೆ ಹೆ ಖಾನ್ ಮುರ್ತಿಕ್ ಭೆಟ್ವಲ್ಲೆ ಮನುನ್ ಕೊನ್‍ಬಿ ತುಕಾ ಸಾಂಗ್ಲ್ಯಾರ್ ತೆ ತಿಯಾ ಖಾವ್‍ನಕೊ; ತುಕಾ ಸಾಂಗಲ್ಲ್ಯಾ ತ್ಯಾ ಮಾನ್ಸಾಸಾಟ್ನಿ ಅನಿ ತುಜ್ಯಾ ಭುತ್ತುರ್‍ಲ್ಯಾ ಮನಾತ್ಲ್ಯಾ ಸಂಶಯಾಕ್ ಅವಕಾಸ್ ದಿವ್ಚೆ ನ್ಹಯ್, ತಸೆ ಮನುನ್ ತಿಯಾ ತೆ ಖಾವ್ಚೆ ನ್ಹಯ್

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:28
11 ತಿಳಿವುಗಳ ಹೋಲಿಕೆ  

ಭೂವಿುಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ.


ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.


ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ನೀನು ಪ್ರೀತಿಗೆ ತಕ್ಕಂತೆ ಇನ್ನು ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿವಿುತ್ತ ಕೆಡಿಸಬಾರದು.


ಪರಲೋಕವು ಯೆಹೋವನದು; ಭೂಲೋಕವನ್ನು ನರಸಂತಾನಕ್ಕೆ ಕೊಟ್ಟಿದ್ದಾನೆ.


ಭೂವಿುಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಅದರ ನಿವಾಸಿಗಳೂ ಆತನವೇ.


ಉನ್ನತೋನ್ನತವಾದ ಆಕಾಶಮಂಡಲವೂ ಮತ್ತು ಭೂವಿುಯೂ ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ;


ಅದಕ್ಕೆ ಮೋಶೆ - ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈ ಎತ್ತಿ ಯೆಹೋವನನ್ನು ಪ್ರಾರ್ಥಿಸುವೆನು; ಆಗ ಗುಡುಗೂ ಕಲ್ಲಿನ ಮಳೆಯೂ ನಿಂತುಹೋಗುವವು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧಿಕಾರದೊಳಗೆ ಇದೆ ಎಂದು ನೀನು ತಿಳಿದುಕೊಳ್ಳುವಿ.


ಆದರೂ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲವಿಲ್ಲದವರಿಗೆ ಒಂದು ವೇಳೆ ವಿಘ್ನವಾದೀತು, ಎಚ್ಚರಿಕೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು