Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:22 - ಕನ್ನಡ ಸತ್ಯವೇದವು J.V. (BSI)

22 ಏನು, ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತಿನ್ನಲು, ಕುಡಿಯಲು ನಿಮಗೆ ಸ್ವಂತ ಮನೆಗಳಿಲ್ಲವೇ? ನಿರ್ಗತಿಕರನ್ನು ನಾಚಿಕೆಗೀಡುಮಾಡಿ, ದೇವರ ಸಭೆಯನ್ನು ಉಪೇಕ್ಷಿಸಬೇಕೆಂದಿರುವಿರೋ? ಇದರ ಬಗ್ಗೆ ನಿಮಗೆ ನಾನು ಏನು ಹೇಳಲೀ? ನಿಮ್ಮನ್ನು ಹೊಗಳುವುದೋ, ತೆಗಳುವುದೋ? ಖಂಡಿತವಾಗಿ ನಿಮ್ಮನ್ನು ಹೊಗಳಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಉಣ್ಣುವುದಕ್ಕೂ, ಕುಡಿಯುವುದಕ್ಕೂ ನಿಮಗೆ ಮನೆಗಳಿಲ್ಲವೇ? ಅಥವಾ ದೇವರ ಸಭೆಯನ್ನು ಹೀನೈಸಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಇದಕ್ಕಾಗಿ ನಾನು ನಿಮ್ಮನ್ನು ಹೊಗಳಬೇಕೆ? ಖಂಡಿತ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆವ್ಕ್ ಅನಿ ಪಿವ್ಕ್ ತುಮ್ಚ್ಯಾ, ತುಮ್ಚ್ಯಾ ಘರಾತ್ ನಾ ಕಾಯ್? ದೆವಾಚೆ ಆರಾದನ್ ಕರ್‍ತಲ್ಯಾ ಜಾಗ್ಯಾಚಿ ತುಮಿ ಪರ್ವಾ ಕರಿನಸ್ತಾನಾ ರ್‍ಹಾವ್ಚೆ ಅನಿ ಗರಿಬಾಕ್ನಿ ತುಮಿ ಅಶೆ ಲಜ್ಜೆಕ್ ಘಾಲುಚೆ ಕಾಯ್? ಹ್ಯಾ ವಿಶಯಾತ್ ಮಿಯಾ ತುಮ್ಕಾ ಕಾಯ್ ಮನು? ತುಮ್ಕಾ ಹೊಗ್ಳು ಕಿ? ನಾ ತುಮ್ಕಾ ಹೊಗ್ಳುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:22
10 ತಿಳಿವುಗಳ ಹೋಲಿಕೆ  

ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?


ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರುವದರಿಂದ ಕೇಡಾಗುತ್ತದೆಯೇ ಹೊರತು ಮೇಲಾಗುವದಿಲ್ಲ.


ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡಿಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.


ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ; ನೀವು ಕೂಡಿ ಬಂದದ್ದು ನ್ಯಾಯತೀರ್ಪಿಗೊಳಗಾಗುವದಕ್ಕೆ ಕಾರಣವಾಗಬಾರದು. ವಿುಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು