Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:26 - ಕನ್ನಡ ಸತ್ಯವೇದವು J.V. (BSI)

26 ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಕುಡಿಯುವಾಗಲೆಲ್ಲಾ ಪ್ರಭುವಿನ ಮರಣವನ್ನು ಆತನು ಬರುವ ತನಕ ಪ್ರಚುರಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕಶ್ಯಾಕ್ ಮಟ್ಲ್ಯಾರ್ ಕವ್ಡೆಂದಾ ತುಮಿ ಹಿ ಭಾಕ್ರಿ ಖಾತ್ಯಾಶಿ ಅನಿ ಹ್ಯಾ ಆಯ್ದಾನಾತ್ಲೆ ಫಿತ್ಯಾಶಿ ತವ್ದೆಂದಾ ಧನಿಯಾಚೆ ಮರಾನ್ ತೊ ಯೆಯ್‍ ಪತರ್ ತುಮಿ ಪ್ರಚಾರ್ ಕರ್ತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:26
16 ತಿಳಿವುಗಳ ಹೋಲಿಕೆ  

ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.


ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಕ್ಕೆ ಸೇರಿಸಲ್ಪಟ್ಟಿರುವ ಈ ಯೇಸು ಯಾವ ರೀತಿಯಲ್ಲಿ ಆಕಾಶದೊಳಕ್ಕೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.


ಯೇಸು ಅವನಿಗೆ - ನಾನು ಬರುವ ತನಕ ಇವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.


ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಇದರ ದೆಸೆಯಿಂದ ಆ ಶಿಷ್ಯನು ಸಾಯುವದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಆತನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು