Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:3 - ಕನ್ನಡ ಸತ್ಯವೇದವು J.V. (BSI)

3 ಆದರೂ ಒಂದು ಸಂಗತಿಯನ್ನು ನೀವು ತಿಳಿಯಬೇಕೆಂದು ನನ್ನ ಇಷ್ಟ; ಅದೇನಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನೀವು ಈ ವಿಷಯವನ್ನೂ ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಆಸೆ. ಪ್ರತಿಯೊಬ್ಬ ಪುರುಷನಿಗೂ ಕ್ರಿಸ್ತನು ಶಿರಸ್ಸಾಗಿದ್ದಾನೆ; ಸ್ತ್ರೀಗೆ ಪುರುಷನು ಶಿರಸ್ಸಾಗಿದ್ದಾನೆ; ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರತಿ ಪುರುಷನಿಗೂ ಕ್ರಿಸ್ತನು ಶಿರಸ್ಸು, ಸ್ತ್ರೀಗೆ ಪುರುಷನು ಶಿರಸ್ಸು ಮತ್ತು ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾರೆ, ಎಂಬುದನ್ನು ನೀವು ತಿಳಿಯಬೇಕೆಂಬುದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಹೆ ಎಕ್ ತುಮ್ಕಾ ಗೊತ್ತ್ ರ್‍ಹಾವ್ಚೆ ಹರ್ ಎಕ್ ಘೊವ್ಮನ್ಸಾಚೆ ಟಕ್ಲೆ ಕ್ರಿಸ್ತ್, ಬಾಯ್ಕೊಮಾನ್ಸಿಚೆ ಟಕ್ಲೆ ಘೊವ್, ಕ್ರಿಸ್ತಾಚೆ ಟಕ್ಲೆ ದೆವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:3
23 ತಿಳಿವುಗಳ ಹೋಲಿಕೆ  

ಆಮೇಲೆ ಸ್ತ್ರೀಗೆ - ನೀನು ಗರ್ಭಿಣಿಯಾಗಿರುವ ಕಾಲದಲ್ಲಿ ಬಹು ಸಂಕಟಪಡಬೇಕೆಂದು ನಾನು ನೇವಿುಸಿದ್ದೇನೆ; ಕಷ್ಟದಿಂದಲೇ ಮಕ್ಕಳನ್ನು ಹೆರುವಿ; ಗಂಡನ ಮೇಲೆ ನಿನಗೆ ಆಶೆಯಿರುವದು; ಅವನು ನಿನಗೆ ಒಡೆಯನಾಗುವನು. ಎಂದು ಹೇಳಿದನು.


ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ; ಇದು ಕರ್ತನಲ್ಲಿರುವವರಿಗೆ ಯೋಗ್ಯವಾಗಿದೆ.


ಸಭೆಯೆಂಬ ದೇಹಕ್ಕೆ ಆತನು ಶಿರಸ್ಸು; ಆತನು ಆದಿಸಂಭೂತನು. ಎಲ್ಲಾದರಲ್ಲಿ ಪ್ರಮುಖನಾಗುವಂತೆ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.


ಪ್ರೀತಿಯಿಂದ ಸತ್ಯವನ್ನನುಸರಿಸುತ್ತಾ ಬೆಳೆದು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ಐಕ್ಯವನ್ನು ಹೊಂದುತ್ತಾ ಬರಬೇಕು.


ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.


ಮತ್ತು ನೀವು ಆತನಲ್ಲಿದ್ದುಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.


ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ನಿಮಗೆ ಹೇಳಿದ್ದನ್ನು ಕೇಳಿದಿರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುವ ವಿಷಯದಲ್ಲಿ ಸಂತೋಷಪಡುತ್ತಿದ್ದಿರಿ; ಯಾಕಂದರೆ ತಂದೆಯು ನನಗಿಂತ ದೊಡ್ಡವನು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇವಿುಸಿದೆನು.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು