1 ಕೊರಿಂಥದವರಿಗೆ 12:10 - ಕನ್ನಡ ಸತ್ಯವೇದವು J.V. (BSI)10 ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಎಕ್ಲ್ಯಾಕ್ ವಿಚಿತ್ರ್ ಕಾಮಾ ಕರ್‍ತಲೆ ವರು ಗಾವ್ತಾ, ಅನಿಎಕ್ಲ್ಯಾಕ್ ಪ್ರವಾದ್ ಕರ್‍ತಲೆ, ತಿನ್ವೆಚ್ಯಾಕ್ ಪ್ರೆರಕ್ ಆತ್ಮೆ ಪರಿಕ್ಷಾ ಕರುನ್ ಬಗ್ತಲೆ ವರು ಗಾವ್ತಾ. ಎಕ್ಲ್ಯಾಕ್ ದುಸ್ರಿ ದುಸ್ರಿ ಬಾಶಾ ಬೊಲ್ತಲೆ ವರು ಗಾವ್ತಾ, ಅನಿಎಕ್ಲ್ಯಾಕ್ ಹ್ಯಾ ಬಾಶಾಂಚೊ ಅರ್ಥ್ ಸಾಂಗ್ತಲೆ ವರು ಗಾವ್ತಾ. ಅಧ್ಯಾಯವನ್ನು ನೋಡಿ |