Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:13 - ಕನ್ನಡ ಸತ್ಯವೇದವು J.V. (BSI)

13 ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮಿ ಸಗ್ಳ್ಯಾನಿ, ಜುದೆವಾನಿ ಅನಿ ಜುದೆವ್‍ ನ್ಹಯ್ ಹೊತ್ತ್ಯಾನಿ, ಸ್ವತಂತ್ರ್ ಹೊತ್ತ್ಯಾನಿ, ಅನಿ ಗುಲಾಮಾನಿ ಎಕ್ ಆಂಗ್ ಹೊವಸಾಟ್ನಿ ಎಕುಚ್ ಆತ್ಮ್ಯಾಚ್ಯಾ ವೈನಾ ಬಾಲ್ತಿಮ್ ಘೆಟ್ಲಾಂವ್; ಅನಿ ಎಕುಚ್ ಆತ್ಮೊ ಅಮ್ಕಾ ಸಗ್ಳ್ಯಾಕ್ನಿ ಎಕ್ ಫಿವನ್ ಸಾರ್ಕೆ ದಿಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:13
36 ತಿಳಿವುಗಳ ಹೋಲಿಕೆ  

ಒಂದೇ ಪದವಿಯನ್ನು ನಿರೀಕ್ಷಿಸುವದಕ್ಕೆ ಕರೆಯಲ್ಪಟ್ಟವರು; ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ಭರವಸವು ಒಂದೇ, ಸ್ನಾನದೀಕ್ಷೆ ಒಂದೇ.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.


ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು. ದೇವರು ಒಬ್ಬನೇ ಆಗಿರಲಾಗಿ ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಯೋಹಾನನು ಅವರೆಲ್ಲರಿಗೆ - ನಾನಂತೂ ನಿಮಗೆ ನೀರಿನ ಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮದಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.


ನನಗೂ ಆತನ ಗುರುತಿರಲಿಲ್ಲ; ಆದರೆ ನೀರಿನ ಸ್ನಾನವನ್ನು ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನು - ಯಾವನ ಮೇಲೆ ಆತ್ಮವು ಇಳಿದುಬಂದು ಇರುವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮದ ಸ್ನಾನವನ್ನು ಕೊಡುವವನು ಎಂದು ತಾನೇ ನನಗೆ ಹೇಳಿದನು.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.


ಕ್ರಿಸ್ತನಂಬಿಕೆಯ ಕಾಲ ಬರುವದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವದಕ್ಕಾಗಿ ಧರ್ಮಶಾಸ್ತ್ರದ ಕೈಕೆಳಗೆ ಕಾವಲಲ್ಲಿ ಮುಚ್ಚಲ್ಪಟ್ಟಿದ್ದೆವು.


ಅವರೆಲ್ಲರೂ ಸಮುದ್ರವನ್ನು ದಾಟಿಹೋದರು; ಅವರೆಲ್ಲರೂ ಮೋಶೆಯ ಶಿಷ್ಯರಾಗುವದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.


ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.


ಯಾಕಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು