Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:23 - ಕನ್ನಡ ಸತ್ಯವೇದವು J.V. (BSI)

23 ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳೆಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವದುಂಟಲ್ಲಾ; ಹೀಗೆ ಅಂದವಿಲ್ಲದ ಅಂಗಗಳಿಗೆ ಹೆಚ್ಚಾದ ಅಂದವುಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲಾ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಲ್ಪವೆಂದೆಣಿಸುವ ಅಂಗಗಳನ್ನು ಅಧಿಕವಾಗಿ ಮಾನ್ಯಮಾಡುತ್ತೇವೆ. ಗೋಪ್ಯವಾಗಿಡತಕ್ಕವುಗಳನ್ನು ಶೀಲದಿಂದ ಸಂರಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾವು ದೇಹದ ಯಾವ ಅಂಗಗಳನ್ನು ಅಲ್ಪವಾದುವುಗಳೆಂದು ಎಣಿಸುತ್ತೇವೋ ಆ ಅಂಗಗಳ ಬಗ್ಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಯಾವ ಅಂಗಗಳನ್ನು ತೋರಿಸಬಯಸುವುದಿಲ್ಲವೋ ಆ ಅಂಗಗಳನ್ನು ವಿಶೇಷವಾದ ರೀತಿಯಲ್ಲಿ ಸಂರಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕಡಿಮೆ ಗೌರವವುಳ್ಳವುಗಳೆಂದು ಯೋಚಿಸುವವುಗಳನ್ನು ವಿಶೇಷ ಗೌರವದಿಂದ ನೋಡುತ್ತೇವೆ. ಬಹಿರಂಗಪಡಿಸದ ಅಂಗಗಳನ್ನು ವಿಶೇಷ ಮರ್ಯಾದೆಯಿಂದ ಸಂರಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಕಮ್ಮಿ ಮರ್ಯಾದಿಚೆ ಮನುನ್ ಚಿಂತಾಂವ್ ತಸ್ಲ್ಯಾ ಭಾಗಾಕ್ನಿ ಅಮಿ ವಿಶೆಸ್ ಮಾನ್ ದಿತಾಂವ್. ಅಶೆ ಸ್ವಭಾವಿಕ್ ಅಮ್ಚಿ ಭಾಗಾ ಅಮಿ ಬರೆ ನೆಸುನ್ ಬರೆ ದಿಸಿ ಸಾರ್ಕೆ ಕರ್ತಾಂವ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:23
6 ತಿಳಿವುಗಳ ಹೋಲಿಕೆ  

ಯೆಹೋವದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.


ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು; ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.


ದೇಹದಲ್ಲಿ ಅಲ್ಪಬಲವುಳ್ಳವುಗಳಾಗಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ?


ಅಂದವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೆ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಕೂಡಿಸಿದ್ದಾನೆ.


ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಡಂಭವಿಲ್ಲದವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ.


ಆದರೂ ಸ್ತ್ರೀಯರು ಮಾನಸ್ಥೆಯರಾಗಿ ನಂಬಿಕೆಯಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವದರಲ್ಲಿ ರಕ್ಷಣೆಹೊಂದುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು