Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:28 - ಕನ್ನಡ ಸತ್ಯವೇದವು J.V. (BSI)

28 ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ನಿ ದೆವಾನ್ ನೆಮಲ್ಲೆ ಕೊನ್ ಮಟ್ಲ್ಯಾರ್ ತೆನಿ ಹೆ: ಪೈಲೆಚೆ ಅಪೊಸ್ತಲಾ, ದೊನ್ವೆಚೆ ಪ್ರವಾದಿ, ತಿನ್ವೆಚಿ ಶಿಕ್ವುತಲಿ ಲೊಕಾ; ಹೆಂಚ್ಯಾ ಮಾನಾ ವಿಚಿತ್ರ್ ಕಾಮಾ ಕರ್‍ತಲೆ, ಪಿಡಾ ಗುನ್ ಕರ್‍ತಲೆ, ದುಸ್ರ್ಯಾಂಚಿ ಸೆವಾ ಕರ್‍ತಲೆ, ಅಧಿಕಾರ್ ಚಾಲ್ವುತಲೆ ಅನಿ ದುಸ್ರಿ ದುಸ್ರಿ ಬಾಶಾ ಬೊಲ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:28
23 ತಿಳಿವುಗಳ ಹೋಲಿಕೆ  

ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ.


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ನಿಮ್ಮ ಸಭಾನಾಯಕರೆಲ್ಲರಿಗೂ ದೇವಜನರೆಲ್ಲರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ಪ್ರಸಂಗದಲ್ಲಿಯೂ ಉಪದೇಶದಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು.


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಅವರು ಯಾರಾರಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ,


ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು;


ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇವಿುನಿಂದ ಅಂತಿಯೋಕ್ಯಕ್ಕೆ ಬಂದರು.


ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?


ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ವಾಣಿಗಳನ್ನಾಡುವರೋ? ವಾಣಿಗಳ ಅರ್ಥವನ್ನು ಹೇಳುವದಕ್ಕೆ ಎಲ್ಲರಿಗೂ ಶಕ್ತಿಯುಂಟೋ?


ವಾಣಿಯನ್ನಾಡುವವನು ದೇವರ ಸಂಗಡ ಮಾತಾಡುತ್ತಾನೆ ಹೊರತು ಮನುಷ್ಯರ ಸಂಗಡ ಆಡುವದಿಲ್ಲ. ಅವನು ಆತ್ಮಪ್ರೇರಿತನಾಗಿ ರಹಸ್ಯಾರ್ಥಗಳನ್ನು ನುಡಿಯುತ್ತಿದ್ದರೂ ಯಾರೂ ತಿಳುಕೊಳ್ಳುವದಿಲ್ಲ.


ವಾಣಿಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟುಮಾಡುತ್ತಾನೆ, ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡುತ್ತಾನೆ.


ನೀವೆಲ್ಲರೂ ವಾಣಿಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ವಾಣಿಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ವಾಣಿಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು