Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:9 - ಕನ್ನಡ ಸತ್ಯವೇದವು J.V. (BSI)

9 ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಒಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದೇ ಪವಿತ್ರಾತ್ಮರಿಂದ ಒಬ್ಬನಿಗೆ ಅಗಾಧ ವಿಶ್ವಾಸವೂ ಇನ್ನೊಬ್ಬನಿಗೆ ಸ್ವಸ್ಥತೆಯನ್ನೀಯುವ ಶಕ್ತಿಯೂ ದೊರಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಬ್ಬನಿಗೆ ನಂಬಿಕೆಯನ್ನೂ ಮತ್ತೊಬ್ಬನಿಗೆ ಸ್ವಸ್ಥಪಡಿಸುವ ವರವನ್ನೂ ಕೊಡುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಬ್ಬನಿಗೆ ಅದೇ ಆತ್ಮನಿಂದ ನಂಬಿಕೆಯು, ಮತ್ತೊಬ್ಬನಿಗೆ ಅದೇ ಆತ್ಮನಿಂದ ರೋಗ ವಾಸಿಮಾಡುವ ವರಗಳು ಕೊಡಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಎಕ್ಲ್ಯಾಕ್ ತ್ಯಾಚ್ ಆತ್ಮ್ಯಾ ವೈನಾ ವಿಶ್ವಾಸಾಚೆ ವರು ಗಾವ್ತಾ ಅನಿಎಕ್ಲ್ಯಾಕ್ ಪಿಡಾ ಗುನ್ ಕರ್‍ತಲೆ ವರು ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:9
21 ತಿಳಿವುಗಳ ಹೋಲಿಕೆ  

ಹೀಗಿದ್ದರೂ - ನಂಬಿದೆನು, ಆದದರಿಂದ ಮಾತಾಡಿದೆನು ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವ ನಂಬಿಕೆಯ ಭಾವವನ್ನೇ ಹೊಂದಿ ನಾವೂ ನಂಬಿದವರು, ಆದದರಿಂದ ಮಾತಾಡುತ್ತೇವೆ.


ನಂಬಿಕೆಯ ಮೂಲಕ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ವರವೇ.


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;


ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ವಾಣಿಗಳನ್ನಾಡುವರೋ? ವಾಣಿಗಳ ಅರ್ಥವನ್ನು ಹೇಳುವದಕ್ಕೆ ಎಲ್ಲರಿಗೂ ಶಕ್ತಿಯುಂಟೋ?


ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.


ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು.


ಹೀಗಿರುವದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಬರುವಾಗ್ಗೆ ಅವನ ನೆರಳು ಇವರಲ್ಲಿ ಯಾವನ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.


ಅಲ್ಲಿರುವ ರೋಗಿಗಳಿಗೆ ವಾಸಿಮಾಡಿ ಅವರಿಗೆ - ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದದೆ ಎಂದು ಹೇಳಿರಿ.


ದೇವರ ರಾಜ್ಯದ ವಿಷಯವನ್ನು ಸಾರುವದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವದಕ್ಕೂ ಅವರನ್ನು ಕಳುಹಿಸಿದನು.


ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆಹಚ್ಚಿ ವಾಸಿಮಾಡಿದರು.


ಅದಕ್ಕೆ ಯೇಸು - ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ನಾನು ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ. ಇದು ಮಾತ್ರವಲ್ಲದೆ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೆ ಅದೂ ಆಗುವದು.


ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು