Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:1 - ಕನ್ನಡ ಸತ್ಯವೇದವು J.V. (BSI)

1 ನಾನು ಮನುಷ್ಯರ ಭಾಷೆಗಳನ್ನೂ ದೇವದೂತರ ಭಾಷೆಗಳನ್ನೂ ಆಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಮನುಷ್ಯರ ಭಾಷೆಗಳನ್ನಲ್ಲದೆ ದೇವದೂತರ ಭಾಷೆಗಳನ್ನು ಮಾತಾಡಬಹುದು. ಆದರೆ ನನ್ನಲ್ಲಿ ಪ್ರೀತಿಯಿಲ್ಲದಿದ್ದರೆ, ನಾನು ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ತಾಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನ್ಸಾಂಚ್ಯಾ ಅನಿ ದೆವಾಚ್ಯಾ ದುತಾಂಚ್ಯಾ ಸಗ್ಳ್ಯಾ ಬಾಶಾನಿ ಮಿಯಾ ಬೊಲಿಲ್, ಹೊಲ್ಯಾರ್ಬಿ ಮಾಜ್ಯಾ ಭುತ್ತುರ್ ಪ್ರೆಮ್ ನಾ ಹೊಲ್ಯಾರ್ ಮಿಯಾ ಎಕ್ ಆವಾಜ್ ಕರ್‍ತಲ್ಯಾ ಆಯ್ದಾನ್ ಸಾರ್ಕೊ, ಕಿನ್ನಿಕ್ ಕಿನ್ನಿಕ್ ವಾಜ್ತಲ್ಯಾ ತಾಳಾ ಸಾರ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:1
22 ತಿಳಿವುಗಳ ಹೋಲಿಕೆ  

ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ನೀನು ಪ್ರೀತಿಗೆ ತಕ್ಕಂತೆ ಇನ್ನು ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿವಿುತ್ತ ಕೆಡಿಸಬಾರದು.


ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,


ಕಿವಿ - ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿದ್ದಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?


ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.


ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ನನ್ನ ಹೆಸರನ್ನು ಹೇಳಿ ದೆವ್ವಗಳನ್ನು ಬಿಡಿಸುವರು; ಹೊಸಭಾಷೆಗಳಿಂದ ಮಾತಾಡುವರು; ಹಾವುಗಳನ್ನು ಎತ್ತುವರು;


ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.


ವಾಣಿಯನ್ನಾಡುವವನು ದೇವರ ಸಂಗಡ ಮಾತಾಡುತ್ತಾನೆ ಹೊರತು ಮನುಷ್ಯರ ಸಂಗಡ ಆಡುವದಿಲ್ಲ. ಅವನು ಆತ್ಮಪ್ರೇರಿತನಾಗಿ ರಹಸ್ಯಾರ್ಥಗಳನ್ನು ನುಡಿಯುತ್ತಿದ್ದರೂ ಯಾರೂ ತಿಳುಕೊಳ್ಳುವದಿಲ್ಲ.


ವಾಣಿಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟುಮಾಡುತ್ತಾನೆ, ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡುತ್ತಾನೆ.


ನೀವೆಲ್ಲರೂ ವಾಣಿಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ವಾಣಿಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ವಾಣಿಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.


ಇದಲ್ಲದೆ ಪರಲೋಕದ ಕಡೆಯಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು