Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:12 - ಕನ್ನಡ ಸತ್ಯವೇದವು J.V. (BSI)

12 ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಅತ್ತಾ ಅಮ್ಕಾ ಆರ್ಶ್ಯಾತ್ನಾ ರುಪ್ ದಿಸ್ಲೆ ಸಾರ್ಕೆ ದಿಸ್ತಾ; ಖರೆ ಮಾನಾ ಅಮಿ ಮುಖಾ ಮುಖಿ ಬಗ್ತಾವ್; ಅತ್ತಾ ಮಾಕಾ ಉಲ್ಲೆ ಉಲ್ಲೆ ಎವ್ಡೆಚ್ ಗೊತ್ತ್ ಹಾಯ್; ಖರೆ ಮಾನಾ ದೆವ್ ಮಾಕಾ ಕಸೊ ವಳಕ್ತಾ ತಸೆಚ್ ಮಿಯಾ ತೆಕಾ ವಳಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:12
20 ತಿಳಿವುಗಳ ಹೋಲಿಕೆ  

ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಇಷ್ಟರೊಳಗೆ ನಾನು ಬಿರುದನ್ನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೋ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಓಡುತ್ತಾ ಇದ್ದೇನೆ.


ಆತನ ದಾಸರು ಆತನಿಗೆ ಯಾಜಕಸೇವೆ ಮಾಡುವರು; ಅವರಿಗೆ ಆತನ ಮುಖದರ್ಶನವಾಗುವದು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.


ಯಾವನಾದರೂ ವಾಕ್ಯವನ್ನು ಕೇಳುವವನಾದರೂ ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು;


ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವಾದದರಿಂದ ದೇಹದಲ್ಲಿ ವಾಸಿಸುವವರೆಗೂ ಕರ್ತನಿಗೆ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆಂಬದನ್ನು ಬಲ್ಲೆವು.


ನಿರ್ಮಲಚಿತ್ತರು ಧನ್ಯರು; ಅವರು ದೇವರನ್ನು ನೋಡುವರು.


ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳುಕೊಳ್ಳುತ್ತಾನೆ.


ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಪದವಿಯನ್ನು ಆಲೋಚಿಸಿ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.


ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.


ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ.


ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು -


ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ ನಿರ್ದೇಹನಾಗಿ ದೇವರನ್ನು ನೋಡುವೆನು;


ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರುಷಗಳು ಅಸಂಖ್ಯಾತವಾಗಿವೆ.


ನಾನು ಬಾಲಕನಾಗಿದ್ದಾಗ ಬಾಲಕನ ಮಾತುಗಳನ್ನಾಡಿದೆನು, ಬಾಲಕನ ಸುಖ ದುಃಖಗಳನ್ನು ಅನುಭವಿಸಿದೆನು, ಬಾಲಕನ ಆಲೋಚನೆಗಳನ್ನು ಮಾಡಿಕೊಂಡೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು