Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:13 - ಕನ್ನಡ ಸತ್ಯವೇದವು J.V. (BSI)

13 ಹೀಗಿರುವದರಿಂದ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಇವುಗಳಲ್ಲಿ ದೊಡ್ಡದು ಪ್ರೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನಂಬಿಕೆ, ನಿರೀಕ್ಷೆ ಮತ್ತು ಪ್ರೀತಿ ಶಾಶ್ವತವಾದವುಗಳಾಗಿವೆ. ಆದರೆ ಇವುಗಳಲ್ಲಿ ಅತ್ಯುನ್ನತವಾದದ್ದು ಪ್ರೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಈಗ ನಂಬಿಕೆ, ನಿರೀಕ್ಷೆ, ಪ್ರೀತಿ, ಈ ಮೂರೇ ಉಳಿದಿರುತ್ತವೆ. ಇವುಗಳಲ್ಲಿ ಮಹತ್ತಾದದ್ದು ಪ್ರೀತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಶೆ ರ್‍ಹಾತಾನಾ ವಿಶ್ವಾಸ್, ಬರೊಸೊ ಅನಿ ಪ್ರೆಮ್ ಹಿ ತಿನ್ ಯೆವ್ಡಿಚ್ ಹುರ್‍ತಾತ್; ಖರೆ ಹೆಂಚ್ಯಾ ಮದ್ದಿ ಪ್ರೆಮುಚ್ ಮೊಟೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:13
43 ತಿಳಿವುಗಳ ಹೋಲಿಕೆ  

ಶೂರರಾಗಿರಿ, ಬಲಗೊಳ್ಳಿರಿ. ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.


ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ. ಅದು ಸಮಸ್ತವನ್ನು ಸಂಪೂರ್ಣಮಾಡುವ ಬಂಧವಾಗಿದೆ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಮತ್ತು ನಾನು ದೇವರನ್ನು ಪ್ರಾರ್ಥಿಸಿ -


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ, ಮತ್ತು ಅವನಲ್ಲಿ ವಿಘ್ನಕರವಾದದ್ದು ಏನೂ ಇಲ್ಲ.


ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸಪ್ರೀತಿಗಳೆಂಬ ವಜ್ರಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಯಾಕಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೇದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾಗಿ ಪ್ರತಿಫಲವನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕು.


ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳುಕೊಳ್ಳುತ್ತಾನೆ.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು.


ಯಾಕಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಕ್ರಿಸ್ತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ತಂದೆಗಳೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿರುವದರಿಂದಲೂ ನಿಮಗೆ ಬರೆದಿದ್ದೇನೆ.


ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು.


ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ.


ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.


ಪ್ರೀತಿಯನ್ನು ಅಭ್ಯಾಸಮಾಡಿಕೊಳ್ಳಿರಿ. ಆದರೂ ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅವುಗಳೊಳಗೆ ವಿಶೇಷವಾಗಿ ಪ್ರವಾದಿಸುವ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.


ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಸಂಬಳ ಬರುವದು.


ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ ಬೋಧನೆಯು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


ಅದಕ್ಕೆ ಅವನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು. ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂದು ಬರೆದದೆ ಅಂದನು.


ನಾವಾದರೋ ಹಿಂದೆಗೆದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಪ್ರಾಣರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಹಾಗಾದರೆ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ಮಹಾ ಪ್ರತಿಫಲ ಉಂಟು.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಯಾವನಿಗೆ ಯಾಕೋಬನ ದೇವರು ಸಹಾಯಕನೋ ಯಾವನು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ ಅವನೇ ಧನ್ಯನು.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು