Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:3 - ಕನ್ನಡ ಸತ್ಯವೇದವು J.V. (BSI)

3 ನನಗಿರುವದೆಲ್ಲವನ್ನು ಅನ್ನದಾನಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನನ್ನಲ್ಲಿರುವ ಪ್ರತಿಯೊಂದನ್ನು ಜನರ ಊಟಕ್ಕಾಗಿ ಕೊಟ್ಟುಬಿಡಬಹುದು. ಹೆಮ್ಮೆಪಡುವುದಕ್ಕಾಗಿ ನಾನು ನನ್ನ ದೇಹವನ್ನೇ ಸಜೀವದಹನವನ್ನಾಗಿ ಒಪ್ಪಿಸಿಕೊಡಬಹುದು. ಆದರೆ ಈ ಕಾರ್ಯಗಳನ್ನೆಲ್ಲ ಮಾಡಿದರೂ ಪ್ರೀತಿಯು ಇಲ್ಲದಿದ್ದರೆ ನನಗೇನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಸಗ್ಳಿ ಮಾಜಿ ಆಸ್ತಿ ಅನಿ ಬದಿಕ್ ಗರಿಬಾಕ್ನಿ ಬಾಳ್ಗುಕ್ ಮನುನ್ ಮಿಯಾ ವಾಟುನ್ ದಿಯ್ನ್ ಅನಿ ಮಾಜೆ ಆಂಗ್ ಸೈತ್ ಮಿಯಾ ಒಪ್ಸುನ್ ದಿಯ್ನ್ ಜಾಲ್ಯಾರ್ಬಿ ಮಾಜ್ಯಾ ಭುತ್ತುರ್ ಪ್ರೆಮ್ ನಸ್ಲ್ಯಾರ್ ಹೆ ಮಾಕಾ ಕಸ್ಲ್ಯಾಬಿ ಫಾಯ್ದ್ಯಾಕ್ ಪಡಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:3
22 ತಿಳಿವುಗಳ ಹೋಲಿಕೆ  

ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವದೂ ಇಲ್ಲ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರಿಗೆ ಕಾಣಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕ ಪಟ್ಟಿಗಳನ್ನು ಅಗಲಮಾಡುತ್ತಾರೆ, ಗೊಂಡೆಗಳನ್ನು ಉದ್ದಮಾಡುತ್ತಾರೆ.


ಅಹಂಕಾರಿಗಳೂ ಒಬ್ಬರನ್ನೊಬ್ಬರು ಕೆಣಕುವವರೂ ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.


ಆಗ ಪೇತ್ರನು - ಇಗೋ, ನಾವು ನಮ್ಮ ನಮ್ಮ ಮನೆಮಾರುಗಳನ್ನು ಬಿಟ್ಟು ನಿನ್ನ ಹಿಂದೆ ಬಂದೆವು ಎಂದು ಹೇಳಲು


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು.


ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕಡಿಮೆಯಾಗಿದೆ; ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಪೇತ್ರನು ಆತನಿಗೆ - ಸ್ವಾಮೀ, ನಾನು ಯಾಕೆ ಈಗ ನಿನ್ನ ಹಿಂದೆ ಬರಲಾರೆನು? ನಿನಗಾಗಿ ನನ್ನ ಪ್ರಾಣವನ್ನಾದರೂ ಕೊಟ್ಟೇನು ಎಂದು ಹೇಳಲು


ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.


ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.


ಆಹಾ, ನೀವು ನಿಷ್ಪ್ರಯೋಜನವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.


ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ನಾನು ನಿನ್ನ ಧರ್ಮವನ್ನು ಬೈಲಿಗೆ ತರುವೆನು, ನಿನ್ನ ಕಾರ್ಯಗಳೇನೋ ನಿನಗೆ ನಿಷ್ಪ್ರಯೋಜನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು