Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:4 - ಕನ್ನಡ ಸತ್ಯವೇದವು J.V. (BSI)

4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4-6 ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪ್ರೆಮ್ ಸೊಸುನ್‍ ಘೆವ್ನ್ ಜಾತಾ, ಪ್ರೆಮ್ ದಯಾಳ್, ಅನಿಎಕ್ಲ್ಯಾಕ್ ಬಗುನ್ ಜಳಿ ನಾ, ಅಪ್ನಾಚಿಚ್ ಬಡಾಯ್ ಬೊಲಿನಾ, ಗರುಕಿನ್ ಭರಿನಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:4
53 ತಿಳಿವುಗಳ ಹೋಲಿಕೆ  

ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ಹೀಗಿರಲಾಗಿ ನೀವು ದೇವರಿಂದ ಆರಿಸಿಕೊಂಡವರೂ ಪ್ರತಿಷ್ಠಿತರೂ ಪ್ರಿಯರೂ ಆಗಿರುವದರಿಂದ ಕನಿಕರ ದಯೆ ದೀನಭಾವ ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ದ್ವೇಷವು ಜಗಳಗಳನ್ನೆಬ್ಬಿಸುತ್ತದೆ; ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.


ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು; ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರರ ಸುಖದುಃಖಗಳಲ್ಲಿ ಸೇರುವವರಾಗಿರಿ; ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ಕರುಣೆಯೂ ದೀನಭಾವವೂ ಉಳ್ಳವರಾಗಿರಿ.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರಸ್ನೇಹವನ್ನೂ ಸಹೋದರಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.


ನೀವು ಪೂರ್ಣ ವಿನಯ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ


ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ


ಇಷ್ಟವು ಔದಾರ್ಯದ ಪ್ರಮಾಣ; [ಇದ್ದರೂ ಇಲ್ಲವೆಂದು] ಸುಳ್ಳಾಡುವವನಿಗಿಂತಲೂ ಏನೂ ಇಲ್ಲದವನೇ ಲೇಸು.


ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ


ಅಹಂಕಾರಿಗಳೂ ಒಬ್ಬರನ್ನೊಬ್ಬರು ಕೆಣಕುವವರೂ ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.


ಸಹೋದರರೇ, ನಾನು ನಿಮಗೋಸ್ಕರವೇ ಹಿಂದಣ ಮಾತುಗಳನ್ನು ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. ನೀವು ನಮ್ಮನ್ನು ದೃಷ್ಟಾಂತವಾಗಿ ಇಟ್ಟುಕೊಂಡು ಶಾಸ್ತ್ರದಲ್ಲಿ ಬರೆದಿರುವದನ್ನು ಮೀರಿ ಹೋಗಬಾರದೆಂಬದನ್ನೂ ನಿಮ್ಮಲ್ಲಿ ಯಾರೂ ಒಬ್ಬ ಬೋಧಕನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದೆಂಬದನ್ನೂ ಕಲಿತುಕೊಳ್ಳಬೇಕು.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘಶಾಂತಿ ಪ್ರೀತಿ ಸೈರಣೆ ಇವುಗಳನ್ನೂ


ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿ ಪೂರ್ವಕವಾಗಿ ಹೇಳುವದು.


ಬಡವರಿಗಾಗಿ ಕೈ ಬಿಚ್ಚಿ ದಿಕ್ಕಿಲ್ಲದವರಿಗೆ ಕೈ ನೀಡುವಳು.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಮರೆತು ಮಾತುಕೇಳದೆ ಹಟಹಿಡಿದು ತಮಗೊಬ್ಬ ನಾಯಕನನ್ನು ನೇವಿುಸಿಕೊಂಡು ಮುಂಚಿನಂತೆ ದಾಸರಾಗಿರುವದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ನೀನಾದರೋ ಪಾಪಗಳನ್ನು ಕ್ಷವಿುಸುವವನೂ ಕನಿಕರದಯೆಗಳುಳ್ಳವನೂ ದೀರ್ಘಶಾಂತನೂ ಕೃಪಾಳುವೂ ಆಗಿರುವ ದೇವರು; ನೀನು ಅವರನ್ನು ಕೈಬಿಡಲಿಲ್ಲ.


ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಯಾಕಂದರೆ ಇನ್ನೂ ಶರೀರಾಧೀನಸ್ವಭಾವವುಳ್ಳವರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು ಜಗಳಗಳು ಇರುವಲ್ಲಿ ನೀವು ಶರೀರಾಧೀನಸ್ವಭಾವವುಳ್ಳವರಾಗಿದ್ದು ಕೇವಲ ನರಪ್ರಾಣಿಗಳಂತೆ ನಡೆಯುತ್ತೀರಲ್ಲವೇ.


ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ.


ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವದರಿಂದ ಅವನ ಗ್ರಹಿಕೆಗೆ ಬರುವದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರ ಮಾಡುತ್ತಾನೆ.


ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.


ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥಗಳ ವಿಷಯದಲ್ಲಿ ಈಗ ನೋಡೋಣ. ನಮ್ಮೆಲ್ಲರಿಗೆ ಜ್ಞಾನವುಂಟೆಂದು ಬಲ್ಲೆವು. ಜ್ಞಾನವು ಉಬ್ಬಿಸುತ್ತದೆ, ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು.


ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು; ಆದರೆ ಅವನ ತಂದೆಯು ಅವನ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡನು.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆ ಎಂಬ ಶಾಸ್ತ್ರೋಕ್ತಿ ಬರೀ ಮಾತೆಂದು ಭಾವಿಸುತ್ತೀರೋ?


ನಿಮ್ಮಲ್ಲಿ ಕೆಲವರು - ಪೌಲನು ನಮ್ಮ ಬಳಿಗೆ ಬರುವದಿಲ್ಲವೆಂದು ಉಬ್ಬಿಕೊಂಡಿದ್ದಾರೆ.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು.


ಹೀಗಿದ್ದರೂ ನೀವು ದುಃಖವನ್ನು ತೋರಿಸದೆ ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ ಉಬ್ಬಿಕೊಂಡೇ ಇದ್ದೀರಲ್ಲಾ.


ರಾಹೇಲಳು ತಾನು ಮಕ್ಕಳನ್ನು ಹೆರದೆ ಇರುವದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು ಯಾಕೋಬನಿಗೆ - ಮಕ್ಕಳನ್ನು ನನಗೆ ಕೊಡು; ಇಲ್ಲದಿದ್ದರೆ ಸಾಯುವೆನು ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು