Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:7 - ಕನ್ನಡ ಸತ್ಯವೇದವು J.V. (BSI)

7 ಎಲ್ಲವನ್ನೂ ಅಡಗಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ಸಹಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರೀತಿಯು ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿಕೊಳ್ಳುತ್ತದೆ; ಯಾವಾಗಲೂ ನಂಬುತ್ತದೆ; ಯಾವಾಗಲೂ ನಿರೀಕ್ಷಿಸುತ್ತದೆ; ಯಾವಾಗಲೂ ದೃಢವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪ್ರೆಮ್ ಸಗ್ಳೆ ಸೊಸುನ್ ಘೆವ್ನ್ ಜಾತಾ, ಸಗ್ಳ್ಯಾ ವೈರ್ ಬರೊಸೊ ಕರ್‍ತಾ ಅನಿ ಸಗ್ಳೆ ಸಂಬಾಳುನ್ ಘೆವ್ಕ್ ಜಾತಾ ಅನಿ ಧೈರ್ಯಾನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:7
29 ತಿಳಿವುಗಳ ಹೋಲಿಕೆ  

ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;


ಕರ್ತನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ಕೇಡನ್ನು ಸಹಿಸಿಕೊಳ್ಳುವವನೂ


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ದ್ವೇಷವು ಜಗಳಗಳನ್ನೆಬ್ಬಿಸುತ್ತದೆ; ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಈ ಹಕ್ಕು ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಹಕ್ಕನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ಉತ್ಕೃಷ್ಟವಾದ ಜ್ಞಾನವಿವೇಕಗಳನ್ನು ನನಗೆ ಹೇಳಿಕೊಡು; ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.


ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿ ಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ಹೆಚ್ಚಳಪಟ್ಟು ದೇವರ ಸಭೆಗಳೊಳಗೆ ನಾವೇ ಮಾತಾಡುತ್ತೇವೆ.


ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.


ದೃಢವಾದ ನಂಬಿಕೆಯುಳ್ಳ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ ದೃಢವಿಲ್ಲದವರ ಅನುಮಾನಗಳನ್ನು ಸಹಿಸಿಕೊಳ್ಳಬೇಕು.


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಆದದರಿಂದ ನಾವು ಆತನ ನಿವಿುತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೋಣ.


ನಾವು ರಕ್ಷಣೆಯನ್ನು ಹೊಂದಿದವರಾದರೂ ಇನ್ನು ಎದುರುನೋಡುವವರಾಗಿದ್ದೇವೆ. ಎದುರುನೋಡುವ ಪದವಿ ಪ್ರತ್ಯಕ್ಷವಾಗಿದ್ದರೆ ಎದುರುನೋಡುವದೇಕೆ? ಪ್ರತ್ಯಕ್ಷವಾದದ್ದನ್ನು ಎದುರುನೋಡುವದುಂಟೇ?


ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೇತನವನ್ನು ಆತನ ಮುಂದೆ ಸ್ಥಾಪಿಸುವೆನು.


ಆದದರಿಂದ ಯಾಕೋಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು; ಆದರೂ ಆಕೆಯಲ್ಲಿ ಬಹಳ ಪ್ರೀತಿಯನ್ನಿಟ್ಟಿದ್ದದರಿಂದ ಅದು ಅವನಿಗೆ ಸ್ವಲ್ಪ ದಿವಸದಂತೆ ಕಾಣಿಸಿತು.


ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತಾಡಿ - ನಿಮ್ಮ ಭಾರವನ್ನು ನಾನೊಬ್ಬನೇ ಹೊರುವದು ಅಸಾಧ್ಯ;


ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.


ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು