Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:8 - ಕನ್ನಡ ಸತ್ಯವೇದವು J.V. (BSI)

8 ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8-9 ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರೀತಿಯು ಎಂದಿಗೂ ಕೊನೆಗೊಳ್ಳುವುದಿಲ್ಲ. ಪ್ರವಾದಿಸುವ ವರಗಳಿವೆ, ಆದರೆ ಅವು ಕೊನೆಗೊಳ್ಳುತ್ತವೆ. ವಿವಿಧ ಭಾಷೆಗಳಲ್ಲಿ ಮಾತಾಡುವ ವರಗಳಿವೆ, ಆದರೆ ಆ ವರಗಳು ಕೊನೆಗೊಳ್ಳುತ್ತವೆ. ಜ್ಞಾನವೆಂಬ ವರವೂ ಇದೆ, ಆದರೆ ಅದೂ ಕೊನೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪ್ರೆಮ್ ಕನ್ನಾಬಿ ಸರಿನಾ, ಪ್ರವಾದ್ಯಾಚೆ ಬೊಲ್ನೆ ಸರುನ್, ಜಾಯ್ಲ್ ವಿಚಿತ್ರ್ ಭಾಶಾ ಬೊಲ್ತಲೆ ವರು ಸರುನ್ ಜಾಯ್ಲ್; ಶಾನ್‍ಪಾನಾಚಿ ವರಾ ನಾ ಪತ್ತೊ ಹೊವ್ನ್ ಜಾತಿಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:8
14 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಇವುಗಳಲ್ಲಿ ದೊಡ್ಡದು ಪ್ರೀತಿಯೇ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.


ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ.


ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.


ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.


ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮವರವು ಅವರ ಮೇಲೆ ಬಂತು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ಆದಕಾರಣ ನನ್ನ ಸಹೋದರರೇ, ಪ್ರವಾದಿಸುವದಕ್ಕೆ ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ವಾಣಿಯನ್ನಾಡುವದಕ್ಕೆ ಬೇಡವೆನ್ನಬಾರದು.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರಂದರೆ - ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಉಪರಾಜನಾದ ಹೆರೋದನ ಸಾಕತಮ್ಮನಾದ ಮೆನಹೇನ, ಸೌಲ ಇವರೇ.


ಇಂಥಿಂಥದನ್ನು ತಿಳುಕೊಂಡಿದ್ದೇನೆಂದು ನೆನಸಿದವನು ತಾನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು