Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:1 - ಕನ್ನಡ ಸತ್ಯವೇದವು J.V. (BSI)

1 ಪ್ರೀತಿಯನ್ನು ಅಭ್ಯಾಸಮಾಡಿಕೊಳ್ಳಿರಿ. ಆದರೂ ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅವುಗಳೊಳಗೆ ವಿಶೇಷವಾಗಿ ಪ್ರವಾದಿಸುವ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರೀತಿಯೇ ನಿಮ್ಮ ಗುರಿಯಾಗಿರಲಿ. ಅಲ್ಲದೆ ಪವಿತ್ರಾತ್ಮನ ವರಗಳನ್ನು ಹೊಂದಿಕೊಳ್ಳಲು ವಿಶೇಷವಾಗಿ ಪ್ರವಾದಿಸುವ ವರವನ್ನು ಬಹಳವಾಗಿ ಅಪೇಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರೀತಿಯ ಮಾರ್ಗ ಅನುಸರಿಸಿರಿ, ಆತ್ಮಿಕ ವರಗಳನ್ನು, ವಿಶೇಷವಾಗಿ ಪ್ರವಾದಿಸುವ ವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪ್ರೆಮಾಚ್ಯಾ ಸಾರ್ಕೆ ಚಲಾ , ಆತ್ಮಿಕ್ ವರು, ಲೈ ಕರುನ್ ಪ್ರವಾದ್ ಕರ್ತಲೆ ವರು ಜೊಡುನ್ ಘೆವ್ಕ್ ತುಮಿ ಆಶಾ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:1
29 ತಿಳಿವುಗಳ ಹೋಲಿಕೆ  

ಆದಕಾರಣ ನನ್ನ ಸಹೋದರರೇ, ಪ್ರವಾದಿಸುವದಕ್ಕೆ ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ವಾಣಿಯನ್ನಾಡುವದಕ್ಕೆ ಬೇಡವೆನ್ನಬಾರದು.


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.


ಶೂರರಾಗಿರಿ, ಬಲಗೊಳ್ಳಿರಿ. ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.


ಸಹೋದರರೇ, ಪವಿತ್ರಾತ್ಮದಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ಅಪೇಕ್ಷಿಸುತ್ತೇನೆ.


ಹೀಗಿರುವದರಿಂದ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಇವುಗಳಲ್ಲಿ ದೊಡ್ಡದು ಪ್ರೀತಿಯೇ.


ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ; ಧರ್ಮಾಸಕ್ತನು ಆತನಿಗೆ ಪ್ರಿಯ.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ದೇವರಾತ್ಮನಿಂದ ನಡಿಸಲ್ಪಡುವವನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತನ ವಿಧಿಯೇ ಎಂದು ಚೆನ್ನಾಗಿ ತಿಳುಕೊಳ್ಳಲಿ.


ಸದ್ಧರ್ಮನಿರತರಾದ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರಿ, ಯಾವ ಗುಂಡಿಯಿಂದ ತೋಡಲ್ಪಟ್ಟಿರಿ ಎಂಬದನ್ನು ನೋಡಿರಿ.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಉತ್ಕೃಷ್ಟವಾದ ಮಾರ್ಗವನ್ನು ನಿಮಗೆ ತೋರಿಸುತ್ತೇನೆ.


ನೀತಿ ಕೃಪೆಗಳನ್ನು ಹುಡುಕುವವನು ನೀತಿ ಜೀವಕೀರ್ತಿಗಳನ್ನು ಪಡೆಯುವನು.


ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ.


ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರಸ್ನೇಹವನ್ನೂ ಸಹೋದರಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.


ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆಯ ರೂಪವಾಗಿದ್ದರೆ ನಮ್ಮ ವಿಶ್ವಾಸ ವರಕ್ಕೆ ತಕ್ಕ ಹಾಗೆ ಪ್ರವಾದನೆ ಹೇಳೋಣ.


ನೀನು ಯೌವನದ ಇಚ್ಫೆಗಳಿಗೆ ದೂರವಾಗಿರು; ನೀತಿ ವಿಶ್ವಾಸ ಪ್ರೀತಿ ಮತ್ತು ಸಮಾಧಾನವನ್ನು ಸಂಪಾದಿಸುವದಕ್ಕೆ ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ಪ್ರಯಾಸಪಡು.


ಹಾಗಾದರೆ ಏನು ಹೇಳೋಣ? ನೀತಿಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.


ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ಆದದರಿಂದ ವಾಣಿಗಳನ್ನಾಡುವದು ನಂಬದವರಿಗೆ ಸೂಚನೆಗಾಗಿದೆ ಹೊರತು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳುಕೊಳ್ಳಬೇಕು. ಆದರೆ ಪ್ರವಾದನೆಯು ನಂಬದವರಿಗೋಸ್ಕರವಲ್ಲ ನಂಬುವವರಿಗೋಸ್ಕರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು