Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:13 - ಕನ್ನಡ ಸತ್ಯವೇದವು J.V. (BSI)

13 ಆದದರಿಂದ ವಾಣಿಯನ್ನಾಡುವವನು ತನಗೆ ಅದರ ಅರ್ಥವನ್ನು ಹೇಳುವ ಶಕ್ತಿಯೂ ಉಂಟಾಗಬೇಕೆಂದು ದೇವರನ್ನು ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪರವಶಾಭಾಷೆಗಳಲ್ಲಿ ಮಾತನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವ ಸಾಮರ್ಥ್ಯಕ್ಕಾಗಿ ದೇವರನ್ನು ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪರಭಾಷೆಯಲ್ಲಿ ಮಾತಾಡುವ ವರವುಳ್ಳವನು ತಾನು ಹೇಳುವ ವಿಷಯಗಳನ್ನು ಅನುವಾದಿಸುವ ಸಾಮರ್ಥ್ಯಕ್ಕಾಗಿಯೂ ದೇವರಲ್ಲಿ ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ, ಅನ್ಯಭಾಷೆಗಳನ್ನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವುದಕ್ಕೆ ದೇವರನ್ನು ಪ್ರಾರ್ಥಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಸೆ ಮನುನ್, ವಿಚಿತ್ರ್ ಬಾಶಾನಿ ಬೊಲ್ತಲೊ, ತ್ಯಾ ಬಾಶಾಂಚೊ ಅರ್ಥ್ ಸಾಂಗ್ತಲೊ ವರುಬಿ ಅಪ್ನಾಕ್ ಗಾವುಂದಿತ್ ಮನುನ್ ಮಾಗ್ನೆ ಕರುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:13
11 ತಿಳಿವುಗಳ ಹೋಲಿಕೆ  

ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ವಾಣಿಗಳನ್ನಾಡುವರೋ? ವಾಣಿಗಳ ಅರ್ಥವನ್ನು ಹೇಳುವದಕ್ಕೆ ಎಲ್ಲರಿಗೂ ಶಕ್ತಿಯುಂಟೋ?


ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವದೆಂದು ನಿಮಗೆ ಹೇಳುತ್ತೇನೆ.


ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.


ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.


ಇವರೆಲ್ಲರು ಏಕಮನಸ್ಸಾಗಿ ದೇವರ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಕೆಲವು ಮಂದಿ ಹೆಂಗಸರೂ ಯೇಸುವಿನ ತಾಯಿಯಾದ ಮರಿಯಳೂ ಆತನ ತಮ್ಮಂದಿರೂ ಅವರ ಸಂಗಡ ಇದ್ದರು.


ಹಾಗೆಯೇ ನೀವೂ ಆತ್ಮಪ್ರೇರಿತವಾದ ನುಡಿಗಳನ್ನಾಡುವದಕ್ಕೆ ಅಪೇಕ್ಷಿಸುವವರಾಗಿರುವದರಿಂದ ಸಭೆಗೆ ಭಕ್ತಿವೃದ್ಧಿ ಉಂಟಾಗುವ ಹಾಗೆ ಅದಕ್ಕಿಂತಲೂ ಹೆಚ್ಚಾದದ್ದನ್ನು ಮಾಡುವದಕ್ಕೆ ಪ್ರಯತ್ನಿಸಿರಿ.


ಯಾಕಂದರೆ ನಾನು ವಾಣಿಯನ್ನಾಡುತ್ತಾ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುವದೇ ಹೊರತು ನನ್ನ ಬುದ್ಧಿ ನಿಷ್ಫಲವಾಗಿರುವದು.


ಹಾಗಾದರೇನು, ಸಹೋದರರೇ? ನೀವು ಕೂಡಿ ಬಂದಿರುವಾಗ ಒಬ್ಬನು ಹಾಡುವದೂ, ಒಬ್ಬನು ಉಪದೇಶಮಾಡುವದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವದೂ, ಒಬ್ಬನು ವಾಣಿಯನ್ನಾಡುವದೂ, ಒಬ್ಬನು ಅದರ ಅರ್ಥವನ್ನು ಹೇಳುವದೂ ಉಂಟಷ್ಟೆ. ನೀವು ಏನೂ ನಡಿಸಿದರೂ ಭಕ್ತಿವೃದ್ಧಿಗಾಗಿಯೇ ನಡಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು