1 ಕೊರಿಂಥದವರಿಗೆ 14:19 - ಕನ್ನಡ ಸತ್ಯವೇದವು J.V. (BSI)19 ಆದರೂ ಸಭೆಯಲ್ಲಿ ವಾಣಿಯಿಂದ ಹತ್ತು ಸಾವಿರ ಮಾತುಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೂ ಸಭೆಯಲ್ಲಿ ಪರವಶನಾಗಿ ಹತ್ತುಸಾವಿರ ನುಡಿಗಳನ್ನಾಡುವ ಬದಲು ಮನಸ್ಸಾರೆ ಐದೇ ಮಾತುಗಳನ್ನಾಡಿ ಉಪದೇಶಿಸುವುದು ಉತ್ತಮವೆಂದು ನನಗೆ ತೋರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಸಭಾಕೂಟಗಳಲ್ಲಿ ಅರ್ಥವಾಗದಂಥ ಪರಭಾಷೆಯಲ್ಲಿ ಸಾವಿರಾರು ಮಾತುಗಳನ್ನು ಹೇಳುವುದಕ್ಕಿಂತ ಅರ್ಥವಾಗುವಂಥ ಕೆಲವೇ ಮಾತುಗಳನ್ನು ಹೇಳಲು ಇಷ್ಟಪಡುತ್ತೇನೆ. ಇತರರಿಗೆ ಉಪದೇಶ ಮಾಡುವುದಕ್ಕಾಗಿ ನಾನು ತಿಳುವಳಿಕೆಯಿಂದ ಮಾತಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೂ ಸಭೆಯಲ್ಲಿ ಅನ್ಯಭಾಷೆಗಳಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ, ಇತರರಿಗೆ ಉಪದೇಶ ಮಾಡುವುದನ್ನೇ ನಾನು ಇಷ್ಟಪಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಜಾಲ್ಯಾರ್ಬಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ವಿಚಿತ್ರ್ ಭಾಶಾಚಿ ಧಾ ಹಜಾರ್ ಶಬ್ದಾ ಉಪಯೊಗ್ ಕರ್‍ತಲ್ಯಾಚ್ಯಾನ್ಕಿ, ದುಶ್ರ್ಯಾಕ್ನಿ ಶಿಕ್ವುಕ್ ಪಾಯ್ದ್ಯಾಕ್ ಪಡ್ತಾ ತಿ ಪಾಚ್ ಶಬ್ದಾ ಬೊಲುಕ್ ಮಾಕಾ ಲೈ ಖುಶಿ. ಅಧ್ಯಾಯವನ್ನು ನೋಡಿ |