Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:21 - ಕನ್ನಡ ಸತ್ಯವೇದವು J.V. (BSI)

21 ಅನ್ಯಭಾಷೆಯವರ ಮೂಲಕವಾಗಿಯೂ ಪರದೇಶಸ್ಥರ ನಾಲಿಗೆಯಿಂದಲೂ ನಾನು ಈ ಜನರ ಸಂಗಡ ಮಾತಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಕೊಡುವದಿಲ್ಲವೆಂದು ಕರ್ತನು ಹೇಳುತ್ತಾನೆಂಬದಾಗಿ ಧರ್ಮಶಾಸ್ತ್ರದಲ್ಲಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪವಿತ್ರಗ್ರಂಥದಲ್ಲಿ ಇಂತಿದೆ: ಅನ್ಯಭಾಷೆಯವರ ಮುಖಾಂತರ ಅನ್ಯದೇಶೀಯರ ಬಾಯ ಮುಖಾಂತರ ನಾನೆನ್ನ ಜನರೊಡನೆ ಮಾತಾಡಿದಾಗಲೂ ಎನ್ನ ಮಾತಿಗೆ ಕಿವಿಗೊಡರವರು, ಎಂದರು ಪ್ರಭು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ವಿವಿಧ ಭಾಷೆಗಳನ್ನು ಮಾತಾಡುವವರ ಮೂಲಕವೂ ವಿದೇಶಿಯರ ನಾಲಿಗೆಯ ಮೂಲಕವೂ ನಾನು ಈ ಜನರೊಂದಿಗೆ ಮಾತಾಡುವೆನು; ಆದರೂ ಇವರು ನನಗೆ ವಿಧೇಯರಾಗುವುದಿಲ್ಲ.” ಪ್ರಭುವು ಹೇಳುವುದು ಅದನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಬೇರೆಭಾಷೆಯವರ ಮೂಲಕವಾಗಿಯೂ ವಿದೇಶದವರ ತುಟಿಗಳಿಂದಲೂ ನಾನು ಈ ಜನರೊಡನೆ ಮಾತಾಡುವೆನು, ಆದರೂ ಅವರು ನನಗೆ ಕಿವಿಗೊಡುವುದಿಲ್ಲವೆಂದು ಕರ್ತದೇವರು ಹೇಳುತ್ತಾರೆ,” ಎಂದು ನಿಯಮದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪವಿತ್ರ್ ಖಾಯ್ದ್ಯಾಚ್ಯಾ ಪುಸ್ತಕಾತ್ ಲಿವಲ್ಲೆ ಹಾಯ್, “ದುಸ್ರ್ಯಾ ಬಾಶಾತ್ನಿ ಬೊಲ್ತಲ್ಯಾ ಲೊಕಾಂಚ್ಯಾ ಹೊಟ್ಟಾನಿ ಮಿಯಾ ಹ್ಯಾ ಲೊಕಾಂಚ್ಯಾಕ್ಡೆ ಬೊಲ್ತಾ; ಜಾಲ್ಯಾರ್ಬಿ ತೆನಿ ಮಾಕಾ ಆಯ್ಕಿನಾತ್.” ಮನ್ತಾ ಧನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:21
7 ತಿಳಿವುಗಳ ಹೋಲಿಕೆ  

ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಅದಕ್ಕೆ ಯೇಸು - ನೀವು ದೇವರುಗಳೇ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದದೆಯಲ್ಲಾ; ಶಾಸ್ತ್ರವು ಸುಳ್ಳಾಗಲಾರದಷ್ಟೆ;


ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.


ದೇವಜನರ ಎಲ್ಲಾ ಸಭೆಗಳ ಮರ್ಯಾದೆಯ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಸುಮ್ಮಗಿರಬೇಕು; ಮಾತಾಡುವದಕ್ಕೆ ಅವರಿಗೆ ಅಪ್ಪಣೆಯಿಲ್ಲ; ಅವರು ಅಧೀನದಲ್ಲಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿಯದೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು