Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:25 - ಕನ್ನಡ ಸತ್ಯವೇದವು J.V. (BSI)

25 ಅವನ ಹೃದಯದ ರಹಸ್ಯಗಳು ಬೈಲಾಗುವವು; ಮತ್ತು ಅಡ್ಡಬಿದ್ದು ದೇವರನ್ನು ಆರಾಧಿಸಿ - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬದನ್ನು ಪ್ರಚುರ ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ವ್ಯಕ್ತಿಯ ಹೃದಯದಲ್ಲಿರುವ ರಹಸ್ಯ ಸಂಗತಿಗಳು ಬಯಲಾಗುತ್ತವೆ. ಆದ್ದರಿಂದ ಆ ವ್ಯಕ್ತಿಯು ಅಡ್ಡಬಿದ್ದು ದೇವರನ್ನು ಆರಾಧಿಸುವನು. “ನಿಜವಾಗಿಯೂ ದೇವರು ನಿಮ್ಮ ಸಂಗಡವಿದ್ದಾನೆ” ಎಂದು ಅವನು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನ ಹೃದಯದ ರಹಸ್ಯಗಳು ಬಯಲಾಗುವುವು. ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, “ದೇವರು ನಿಜವಾಗಿಯೂ ನಿಮ್ಮ ಮಧ್ಯದಲ್ಲಿ ಇದ್ದಾರೆ!” ಎಂದು ಪ್ರಕಟಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆಚ್ಯಾ ಭುತ್ತುರ್‍ಲ್ಯಾ ಮನಾತ್ಲೆ ಘುಟ್ ದಿಸುನ್ ಯೆತಾ ತನ್ನಾ ತೊ ಡಬ್ಬ್ ಪಡುನ್ ದೆವಾಕ್ ಆರಾದನ್ ಕರ್‍ತಾ “ದೆವ್ ಖರೆಚ್ ತುಮ್ಚ್ಯಾ ಮದ್ದಿ ಹಾಯ್!” ಮನುನ್ ಪ್ರಚಾರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:25
15 ತಿಳಿವುಗಳ ಹೋಲಿಕೆ  

ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.


ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಯೇಸುವಿನ ಪಾದಗಳಿಗೆ ಅಡ್ಡ ಬಿದ್ದು ಆತನಿಗೆ ಉಪಕಾರಸ್ತುತಿಮಾಡಿದನು. ಅವನು ಸಮಾರ್ಯದವನು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಅವನನ್ನು ಸೇವಿಸಲಿ.


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಾಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನೂ ಅಲ್ಲೇ ಇದ್ದನು.


ಆಗ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕೂತಿರುವ ದೇವರಿಗೆ ನಮಸ್ಕಾರ ಮಾಡಿ - ಆಮೆನ್; ಹಲ್ಲೆಲೂಯಾ, ಅಂದರು.


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ಆ ಹೆಂಗಸು ಆತನಿಗೆ - ಅಯ್ಯಾ, ನೀನು ಪ್ರವಾದಿಯೆಂದು ನನಗೆ ಕಾಣುತ್ತದೆ.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ನಾನೇ ದರ್ಶಿಯು; ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು