Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:31 - ಕನ್ನಡ ಸತ್ಯವೇದವು J.V. (BSI)

31 ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸುವದಕ್ಕೆ ಅಡ್ಡಿಯಿಲ್ಲ; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಎಚ್ಚರಿಕೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನೀವು, ಒಬ್ಬರಾದ ಮೇಲೆ ಒಬ್ಬರು ದೇವರ ವಾಕ್ಯವನ್ನು ಬೋಧಿಸಬಹುದು. ಆಗ ಎಲ್ಲರೂ ಕಲಿತುಕೊಂಡು ಪ್ರೋತ್ಸಾಹಪಡೆಯಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನೀವೆಲ್ಲರೂ ಒಬ್ಬರಾದ ನಂತರ ಒಬ್ಬರು ಪ್ರವಾದಿಸಬಹುದು. ಈ ರೀತಿಯಲ್ಲಿ ಎಲ್ಲಾ ಜನರು ಕಲಿತುಕೊಳ್ಳುವರು ಮತ್ತು ಪ್ರೋತ್ಸಾಹಿತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಎಲ್ಲರೂ ಕಲಿತುಕೊಳ್ಳುವಂತೆಯೂ, ಎಲ್ಲರೂ ಪ್ರೋತ್ಸಾಹ ಹೊಂದುವಂತೆಯೂ, ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತುಮಿ ಸಗ್ಳೆ ಜಾನಾಬಿ ಪ್ರವಾದ್ ಕರುನ್ ಬೊಲುಕ್ ಹೊತಾ, ಖರೆ ಪಾಳಿ ಲಾವ್ನ್ ಎಕ್ ಎಕ್ಲ್ಯಾನಿಚ್ ಬೊಲುಚೆ ಹೆಚ್ಯಾ ವೈನಾ ಸಗ್ಳ್ಯಾಕ್ನಿ ಶಿಕಾಪ್ ಅನಿ ಉಮ್ಮೆದ್ ಜೊಡುನ್ ಘೆವ್ಕ್ ಅವಕಾಸ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:31
17 ತಿಳಿವುಗಳ ಹೋಲಿಕೆ  

ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.


ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವದಕ್ಕೆ ಶಕ್ತರಾಗುತ್ತೇವೆ.


ಅವರು ಏನಾದರೂ ತಿಳುಕೊಳ್ಳುವದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತಾಡುವದು ನಾಚಿಗೆಗೆಟ್ಟ ಕೆಲಸವಾಗಿದೆ.


ಆದರೂ ಸಭೆಯಲ್ಲಿ ವಾಣಿಯಿಂದ ಹತ್ತು ಸಾವಿರ ಮಾತುಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.


ಪ್ರವಾದಿಸುವವರಾದರೋ ಮನುಷ್ಯರ ಸಂಗಡ ಮಾತಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುತ್ತಾನೆ.


ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳುವಳಿಕೆಯನ್ನು ಪಡೆಯುವನು.


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಂಡಿತ್ಯವನ್ನು ಹೊಂದುವನು, ವಿವೇಕಿಯು [ಮತ್ತಷ್ಟು] ಉಚಿತಾಲೋಚನೆಯುಳ್ಳವನಾಗುವನು.


ಕೂತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮಗಾಗಲಿ.


ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿ ಅವೆ.


ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು