Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:14 - ಕನ್ನಡ ಸತ್ಯವೇದವು J.V. (BSI)

14 ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವು ಹುರುಳಿಲ್ಲದ್ದು ಮತ್ತು ನಿಮ್ಮ ನಂಬಿಕೆಯೂ ಹುರುಳಿಲ್ಲದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕ್ರಿಸ್ತಯೇಸು ಪುನರುತ್ಥಾನರಾಗಲಿಲ್ಲ ಎಂದರೆ ನಮ್ಮ ಬೋಧನೆ ಬರಿದು; ನಿಮ್ಮ ವಿಶ್ವಾಸವೂ ಬರಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕ್ರಿಸ್ತನು ಎದ್ದೇಬಂದಿಲ್ಲವಾದರೆ ನಮ್ಮ ಬೋಧನೆಗೂ ನಿಮ್ಮ ನಂಬಿಕೆಗೂ ಯಾವ ಬೆಲೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸು ಎದ್ದು ಬರಲಿಲ್ಲವಾದರೆ, ನಮ್ಮ ಪ್ರಸಂಗವೂ ನಿಮ್ಮ ವಿಶ್ವಾಸವೂ ನಿಷ್ಪ್ರಯೋಜನವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಕ್ರಿಸ್ತಾಕ್ ಝಿತ್ತೊ ಕರುನ್ ಉಟ್ವುನ್ ಹೊವ್ಕ್ ನಾ ಹೊಲ್ಯಾರ್, ಅಮಿ ಪರ್ಗಟ್ ಕರ್ತಾಂವ್ ತಿ ಖಬರ್ ಕಾಯ್ಬಿ ಫಾಯ್ದ್ಯಾಚಿ ನ್ಹಯ್, ಅನಿ ತುಮ್ಚೊ ವಿಶ್ವಾಸ್‍ಬಿ ಕಾಯ್ಬಿ ಫಾಯ್ದ್ಯಾಚೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:14
12 ತಿಳಿವುಗಳ ಹೋಲಿಕೆ  

ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿಷ್ಪ್ರಯೋಜನವಾಗಿದೆ, ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಅಪ್ರಯೋಜಕನೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ?


ದೈವಪ್ರೇರಣೆಗನುಸಾರವಾಗಿ ಹೋದೆನು. ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬದನ್ನು ಅಲ್ಲಿದ್ದವರಿಗೆ ತಿಳಿಸಿದೆನು. ಆದರೆ ನಾನು ಪಡುತ್ತಿರುವ ಪ್ರಯಾಸವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.


ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸವನ್ನು ಗೊತ್ತುಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಬೋಧಿಸುವದರಿಂದ ನನಗೆ ಭಕ್ತಿ ತೋರಿಸುವದು ವ್ಯರ್ಥ ಎಂಬದೇ.


ನಾನು ಯಾವ ಸಂಗತಿಯನ್ನು ಹೇಳಿ ನಿಮಗೆ ಸುವಾರ್ತೆಯನ್ನು ತಿಳಿಸಿದೆನೋ ನೀವು ಅದನ್ನು ಗಟ್ಟಿಯಾಗಿ ಹಿಡುಕೊಂಡರೆ ಮತ್ತು ನಿಮ್ಮ ನಂಬಿಕೆಯು ನಿರಾಧಾರವಾಗದ ಪಕ್ಷಕ್ಕೆ ಆ ಸುವಾರ್ತೆಯಿಂದ ನಿಮಗೆ ರಕ್ಷಣೆಯಾಗುತ್ತದೆ.


ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.


ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡದ್ದೂ ಶುದ್ಧತ್ವದಲ್ಲಿ ಕೈತೊಳಕೊಂಡದ್ದೂ ವ್ಯರ್ಥವೇ ಸರಿ.


ಹೀಗಿರಲಾಗಿ ನೀರು ಇಳಿಯಿತೋ ಇಲ್ಲವೋ ಎಂದು ತಿಳುಕೊಳ್ಳುವದಕ್ಕೆ ನೋಹನು ಪಾರಿವಾಳವನ್ನು ಹೊರಕ್ಕೆ ಬಿಟ್ಟನು.


ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.


ಸತ್ತವರಿಗೆ ಪುನರುತ್ಥಾನವಿಲ್ಲವೆಂಬದು ನಿಜವಾಗಿದ್ದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು