Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:20 - ಕನ್ನಡ ಸತ್ಯವೇದವು J.V. (BSI)

20 ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದೇ ಇದ್ದಾನೆ; ನಿದ್ರೆಹೋದವರಲ್ಲಿ ಪ್ರಥಮಫಲವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಅತ್ತಾ ಕ್ರಿಸ್ತಾಕ್ ಮರಲ್ಲ್ಯಾತ್ನಾ ಝಿತ್ತೊ ಕರುನ್ ಉಟ್ವಲ್ಲೆ ಖರೆ ಹಾಯ್; ಮರಲ್ಲ್ಯಾಕ್ನಿ ಮರಲ್ಲ್ಯಾತ್ನಾ ಝಿತ್ತೆ ಕರುನ್ ಉಟ್ವುಲ್ಯಾಕ್ ಹೆ ಎಕ್ ಖಾತ್ರಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:20
10 ತಿಳಿವುಗಳ ಹೋಲಿಕೆ  

ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.


ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರಿಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ


ಸಭೆಯೆಂಬ ದೇಹಕ್ಕೆ ಆತನು ಶಿರಸ್ಸು; ಆತನು ಆದಿಸಂಭೂತನು. ಎಲ್ಲಾದರಲ್ಲಿ ಪ್ರಮುಖನಾಗುವಂತೆ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ತರುವಾಯ ಒಂದೇ ಸಮಯದಲ್ಲಿ ಐನೂರು ಮಂದಿಗಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ. ಕೆಲವರು ನಿದ್ರೆಹೋಗಿದ್ದಾರೆ.


ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು