Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:26 - ಕನ್ನಡ ಸತ್ಯವೇದವು J.V. (BSI)

26 ಮರಣವು ಕಡೇ ಶತ್ರುವಾಗಿ ನಿವೃತ್ತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕಟ್ಟಕಡೆಗೆ ನಿರ್ಮೂಲವಾಗುವ ಶತ್ರುವೆಂದರೆ ಮೃತ್ಯುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾಶವಾಗುವ ಕಡೆಯ ಶತ್ರುವೆಂದರೆ ಮರಣವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಕೊನೆಯದಾಗಿ, ನಿರ್ಮೂಲವಾಗುವ ವೈರಿ ಮರಣವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಆಕ್ರಿಕ್ ನಾಸ್ ಕರುನ್ ಹೊತಲೊ ದುಸ್ಮಾನ್ ಕೊನ್ ಮಟ್ಲ್ಯಾರ್, ಮರಾನುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:26
9 ತಿಳಿವುಗಳ ಹೋಲಿಕೆ  

ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಮರಣವೇ, ನಿನ್ನ ಜಯವೆಲ್ಲಿ? ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,


ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿದ್ದಾರೆ. ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯು ಸೂಚಿಸಿದ್ದಾನೆ.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು