Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:27 - ಕನ್ನಡ ಸತ್ಯವೇದವು J.V. (BSI)

27 ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆಂಬದಾಗಿ ಹೇಳಿಯದೆಯಲ್ಲಾ. ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿ ಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿ ಅವರಿಗೆ ಅಧೀನಮಾಡಿದ್ದಾರೆ. “ಸಮಸ್ತವೂ ಅವರಿಗೆ ಅಧೀನ ಮಾಡಲಾಗಿದೆ” ಎಂದು ಹೇಳುವಾಗ, ಸಮಸ್ತವನ್ನೂ ಕ್ರಿಸ್ತನಿಗೆ ಅಧೀನಮಾಡಿಕೊಟ್ಟ ದೇವರು ಇದರಲ್ಲಿ ಒಳಪಡಲಿಲ್ಲ ಎಂಬುದು ಸ್ಪಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಕಶ್ಯಾಕ್ ಮಟ್ಲ್ಯಾರ್ ದೆವಾನ್ ಸಗ್ಳಿ ಜಿನ್ಸಾ ತೆಚ್ಯಾ ಪಾಯಾಂಚ್ಯಾ ಬುಡಿ ಘಾಟಲ್ಲಿ ಹಾತ್. ಮನುನ್ ಪವಿತ್ರ್ ಪುಸ್ತಕ್ ಮನ್ತಾ. ಸಗ್ಳಿ ಜಿನ್ಸಾ ಮನ್ತಾನಾ ಸಗ್ಳಿ ಜಿನ್ಸಾ ರಚುನ್ ಕ್ರಿಸ್ತಾಚ್ಯಾ ಖಾಲ್ತಿ ರ್‍ಹಾಯ್ ಸರ್ಕೆ ಕರಲ್ಲೊ ದೆವ್ ಖಾಲ್ತಿ ಹೊತಾ ಮನುನ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:27
14 ತಿಳಿವುಗಳ ಹೋಲಿಕೆ  

ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ;


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸ್ಪಷ್ಟವಾಗಿ ಹೇಳಿದನು. ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು; ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವದನ್ನು ನಾವು ಇನ್ನೂ ಕಾಣುವದಿಲ್ಲ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಆದರೆ ದೇವದೂತರಲ್ಲಿ ಯಾವ ವಿಷಯದಲ್ಲಿಯಾದರೂ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿದ್ದಾನೋ?


ಆದರೆ ಈ ಯಾಜಕನು ಪಾಪನಿವಾರಣೆಗೋಸ್ಕರ ನಿರಂತರವಾಗಿ ನಿಲ್ಲುವ ಒಂದೇ ಯಜ್ಞವನ್ನು ಸಮರ್ಪಿಸಿ ದೇವರ ಬಲಗಡೆಯಲ್ಲಿ ಕೂತುಕೊಂಡನು.


ಆತನ ಬಲಾತಿಶಯವು ಎಷ್ಟು ಮಹತ್ತಾದದ್ದೆಂಬದು ಕ್ರಿಸ್ತನಲ್ಲಿ ತೋರಿಬಂದಿದೆ. ಹೇಗಂದರೆ ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು