Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:31 - ಕನ್ನಡ ಸತ್ಯವೇದವು J.V. (BSI)

31 ಸಹೋದರರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗಿರುವ ಹೆಚ್ಚಳದ ಮೇಲೆ ಆಣೆ ಇಟ್ಟು ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಾನು ಪ್ರತಿದಿನವೂ ಸಾಯುತ್ತೇನೆ. ಸಹೋದರರೇ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ಬಗ್ಗೆ ಹೆಮ್ಮೆಪಡುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಅದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಭಾವಾನು ಅನಿ ಭೆನಿಯಾನು, ದಿಸಾನ್ ದಿಸ್ ಮಿಯಾ ಮಾಕಾಚ್ ಮರ್ನಾಚ್ಯಾ ಅಪಾಯಾತ್ ಘಾಲ್ತಾ ಅನಿ ಜೆಜು ಕ್ರಿಸ್ತಾ ಅಮ್ಚ್ಯಾ ಧನಿಯಾಚ್ಯಾ ವೈನಾ ತುಮ್ಚ್ಯಾ ವಿಶಯಾತ್ ಮಾಕಾ ಅಭಿಮಾನ್ ಹೊತಾ. ತಸೆ ಮನುನ್ ಮಿಯಾ ಹೆ ಘಟ್‍ಪಾನಾನ್ ಸಾಂಗುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:31
14 ತಿಳಿವುಗಳ ಹೋಲಿಕೆ  

ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದರು. ಎಂಬದಾಗಿ ಬರೆದಿರುವಂತೆ ಆಗುತ್ತದಲ್ಲಾ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ನಿಮ್ಮ ನಿವಿುತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಕ್ಕಾಗಿ ದೇವರಿಗೆ ತಕ್ಕಷ್ಟು ಸ್ತೋತ್ರಮಾಡುವದು ನಮ್ಮಿಂದ ಹೇಗಾದೀತು?


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು.


ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ.


ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರವೆಷ್ಟೆಂಬದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ ಎಂದು ಹೇಳಿದನು.


ಮತ್ತು ಯೆಹೋವನ ದೂತನು ಯೆಹೋಶುವನಿಗೆ ಈ ಮಾತು ಕೊಟ್ಟನು -


ಅದಕ್ಕೆ ಯೆಹೂದನು - ಆ ಮನುಷ್ಯನು ನಮಗೆ, ನಿಮ್ಮ ತಮ್ಮನನ್ನು ಕರಕೊಂಡುಬಂದ ಹೊರತು ನನ್ನ ಮುಖವನ್ನು ನೋಡಕೂಡದು ಎಂದು ಖಂಡಿತವಾಗಿ ಹೇಳಿದನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು