Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:34 - ಕನ್ನಡ ಸತ್ಯವೇದವು J.V. (BSI)

34 ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಘುಂಗೆತ್ನಾ ಉಟಾ ಅನಿ ಪಾಪ್ ಕರ್‍ತಲೆ ಸೊಡಾ. ತುಮ್ಚ್ಯಾತ್ಲ್ಯಾ ಉಲ್ಲ್ಯಾ ಲೊಕಾಕ್ನಿ ದೆವಾಚಿ ವಳಕುಚ್ ನಾ. ತುಮ್ಕಾ ಲಜ್ಜಾ ಕರುಕ್ ಪಾಜೆ ಮನುನ್ ಮಿಯಾ ಹೆ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:34
17 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ನಾಚಿಕೆ ಹುಟ್ಟಿಸುವದಕ್ಕೆ ಇದನ್ನು ಹೇಳುತ್ತೇನೆ. ಏನು, ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಜಾಣನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ವಿಮೋಚನೆಯು ಹತ್ತಿರವಾಯಿತು.


ಅಮಲೇರಿದವರೇ, ಎಚ್ಚರಗೊಳ್ಳಿರಿ, ಅಳಿರಿ; ಕುಡಿಕರೇ, ಅರಚಿಕೊಳ್ಳಿರಿ; ದ್ರಾಕ್ಷಾರಸವು ನಿಮ್ಮ ಬಾಯಿಗೆ ಇನ್ನು ಬೀಳದು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಆದರೆ ಈ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈ ವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಕ್ಕೆ ನೈವೇದ್ಯ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿದ್ದು ಕಲೆಯನ್ನು ಹೊಂದುತ್ತದೆ.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು.]


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು - ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪಮಾಡಬೇಡ; ನಿನಗೆ ಹೆಚ್ಚಿನ ಕೇಡು ಬಂದೀತು ಅಂದನು.


ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.


ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಭಯಪಡಿರಿ, ಪಾಪಮಾಡಬೇಡಿರಿ, ಮೌನವಾಗಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ. ಸೆಲಾ.


ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದೆ ತಪ್ಪುವವರಾಗಿದ್ದೀರಿ;


ದೇವರು ಸತ್ತವರನ್ನು ಎಬ್ಬಿಸಿದ್ದು ನಂಬತಕ್ಕದ್ದಲ್ಲವೆಂದು ನೀವು ಯಾಕೆ ತೀರ್ಮಾನಿಸುತ್ತೀರಿ?


ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು