1 ಕೊರಿಂಥದವರಿಗೆ 15:37 - ಕನ್ನಡ ಸತ್ಯವೇದವು J.V. (BSI)37 ಒಂದು ವೇಳೆ ಗೋದಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನೀನು ಬಿತ್ತುವುದು ಗೋದಿಯನ್ನು ಅಥವಾ ಇನ್ನಾವುದೋ ಕಾಳನ್ನು; ಮುಂದಕ್ಕೆ ಬೆಳೆಯಲಿರುವ ಇಡೀ ಗಿಡವನ್ನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನೀನು ಒಂದು ವೇಳೆ ಗೋಧಿಯನ್ನಾಗಲಿ, ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ, ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತಿಯಾ ಉಗಾತ್ ಘಾಲ್ತಾನಾ ಫಿಡೆ ಹೊತಲೆ ಹಾಯ್ ತೆ ಮೊಟೆ ನಾಹೊಲ್ಯಾರ್ ಬಾರಿಕ್ಲೆ ಝಾಡ್ ಉಗಾತ್ ಘಾಲ್ತೆ ಕಾಯ್, ದುಸ್ರೆ ಕಸ್ಲೆ ತರ್ ಬಿಂಯ್ ಉಗಾತ್ ಘಾಲ್ತೆ. ಅಧ್ಯಾಯವನ್ನು ನೋಡಿ |