Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:54 - ಕನ್ನಡ ಸತ್ಯವೇದವು J.V. (BSI)

54 ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವದು. ಆ ಮಾತು ಏನಂದರೆ - ಮರಣವು ನುಂಗಿಯೇ ಹೋಯಿತು, ಜಯವಾಯಿತು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಅಳಿದುಹೋಗುವ ಈ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಈ ಮಾತುಗಳು ನೆರವೇರುತ್ತವೆ: “ಮರಣವು ಜಯದಲ್ಲಿ ನುಂಗಿಯೇಹೋಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಹ್ಯಾ ನಾಸ್ ಹೊವ್ನ್ ಜಾತಲ್ಯಾ ಆಂಗಾನ್ ನಾಸ್ ಹೊಯ್ನಸಲ್ಲೆ ಗುನ್ ಅನಿ ಮರಾನ್ ಅಸಲ್ಲ್ಯಾ ಆಂಗಾನ್ ಕನ್ನಾಚ್ ಮರಾನ್ ನಸಲ್ಲೆ ಗುನ್ ನೆಸಲ್ಲ್ಯಾ ತನ್ನಾ ಪವಿತ್ರ್ ಪುಸ್ತಕಾತ್ಲ್ಯಾ ಹ್ಯಾ ಸಾಂಗ್ನಿಯಾ ಘಡ್ತ್ಯಾತ್: ಜಿಕೆನ್ ಮರ್‍ನಾಕ್ ಗಿಳ್ಳಿನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:54
12 ತಿಳಿವುಗಳ ಹೋಲಿಕೆ  

ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿದ್ದಾರೆ. ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯು ಸೂಚಿಸಿದ್ದಾನೆ.


ಯೇಸುವಿನ ಜೀವವು ನಮ್ಮ ಮರ್ತ್ಯಶರೀರದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿವಿುತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪಗಳನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ಲಯವಿಲ್ಲದ ದೇವರ ಮಹಿಮೆಯನ್ನು ಬಿಟ್ಟು ಅದಕ್ಕೆ ಬದಲಾಗಿ ಲಯವಾಗುವ ಮನುಷ್ಯ ಪಶು ಪಕ್ಷಿ ಸರ್ಪಾದಿಗಳ ಮೂರ್ತಿಯನ್ನು ಮಾಡಿಕೊಂಡರು.


ಈ ಗುಡಾರದಲ್ಲಿರುವವರಾದ ನಾವು ಭಾರ ಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿ ಹೋಗಬೇಕೆಂದು ನಮ್ಮ ಇಷ್ಟವಲ್ಲ; ಮರ್ತ್ಯವಾದದ್ದು ನುಂಗಿಹೋಗಿ ಜೀವವೊಂದೇ ಉಳಿಯುವಂತೆ ಈ ಗುಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಬೇಕೆಂಬದೇ ನಮ್ಮ ಇಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು