Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:55 - ಕನ್ನಡ ಸತ್ಯವೇದವು J.V. (BSI)

55 ಮರಣವೇ, ನಿನ್ನ ಜಯವೆಲ್ಲಿ? ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 “ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಸಾವಿಗೆ ಸೋಲಾಯಿತು, ಜಯವು ಸಂಪೂರ್ಣವಾಯಿತು. ಎಲೈ ಸಾವೇ, ನಿನ್ನ ಜಯವೆಲ್ಲಿ? ಎಲೈ ಸಾವೇ, ನಿನ್ನ ವಿಷಕೊಂಡಿಯೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 “ಮರಣವೇ, ನಿನ್ನ ಜಯವೆಲ್ಲಿ? ಮರಣವೇ, ಕೇಡುಮಾಡುವ ನಿನ್ನ ಶಕ್ತಿ ಎಲ್ಲಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 “ಓ ಮರಣವೇ, ನಿನ್ನ ಜಯವು ಎಲ್ಲಿ? ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಎ ಮರ್ನಾ ಖೈ ಹಾಯ್ ತುಜಿ ಜಿಕ್? ಎ ಮರ್ನಾ ತುಜಿ ತರಾಸ್ ಕರ್‍ತಲೆ ತಾಕತ್ ಖೈ ಹಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:55
16 ತಿಳಿವುಗಳ ಹೋಲಿಕೆ  

ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನು ದೇವಾಜ್ಞೆಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚಕಪುರುಷನಾಗಿದ್ದಾನೆ.


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ, ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.


ತನ್ನನ್ನು ಪಾತಾಳಕ್ಕೆ ತಪ್ಪಿಸಿಕೊಂಡು ಮರಣಹೊಂದದೆ ಚಿರಂಜೀವಿಯಾಗಿರುವ ಮನುಷ್ಯನು ಯಾವನಿದ್ದಾನೆ? ಸೆಲಾ.


ಅವನು - ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು - ನೀನು ಹಿಂಸೆಪಡಿಸುವ ಯೇಸುವೇ ನಾನು.


ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ ಹಾಗೆ ತಮ್ಮ ಮರಣದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ; ಯುದ್ಧಕಾಲದಲ್ಲಿ ಹೇಗೆ ವಿರಾಮ ದೊರೆಯುವದಿಲ್ಲವೋ ಹಾಗೆ ಅಧರ್ಮಕ್ಕೊಳಪಟ್ಟವನಿಗೆ ಬಿಡುಗಡೆಯಿಲ್ಲ.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -


ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವದು; ಎಲ್ಲಕ್ಕೂ ಪ್ರಾಣ ಒಂದೇ; ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ; ಎಲ್ಲಾ ಬರೀ ಗಾಳಿಯೇ.


ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಕೊಂಡಿಗಳೂ ಉಂಟು; ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವದು.


ಮರಣದ ಕೊಂಡಿ ಪಾಪವೇ; ಮತ್ತು ಪಾಪದ ಬಲಕ್ಕೆ ಆಧಾರವು ಧರ್ಮಶಾಸ್ತ್ರವೇ.


ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು