Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:56 - ಕನ್ನಡ ಸತ್ಯವೇದವು J.V. (BSI)

56 ಮರಣದ ಕೊಂಡಿ ಪಾಪವೇ; ಮತ್ತು ಪಾಪದ ಬಲಕ್ಕೆ ಆಧಾರವು ಧರ್ಮಶಾಸ್ತ್ರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಪಾಪವೇ ಸಾವಿನ ವಿಷಕೊಂಡಿ. ಪಾಪಕ್ಕೆ ಶಕ್ತ್ಯಾಧಾರ ಶಾಸ್ತ್ರವಿಧಿಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಕೇಡುಮಾಡಲು ಮರಣಕ್ಕಿರುವ ಶಕ್ತಿಯು ಪಾಪವೇ. ಪಾಪದ ಶಕ್ತಿಯು ಧರ್ಮಶಾಸ್ತ್ರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ಮರ್‍ನಾಕ್ ದುಸ್ರ್ಯಾಕ್ನಿ ದುಕ್ ದಿತಲಿ ತಾಕತ್ ಪಾಪಾಕ್ನಾ ಗಾವ್ತಾ ಅನಿ ಪಾಪಾಕ್ ತಾಕತ್ ಮೊಯ್ಜೆಚ್ಯಾ ಖಾಯ್ದ್ಯಾಕ್ನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:56
15 ತಿಳಿವುಗಳ ಹೋಲಿಕೆ  

ಯಾಕಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದು. ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಮೀರೋಣವೆಂಬದೂ ಇಲ್ಲ.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಅಪರಾಧಗಳು ಹೆಚ್ಚಾಗಿ ಕಂಡುಬರುವ ಹಾಗೆ ಧರ್ಮಶಾಸ್ತ್ರವು ಮಧ್ಯೆ ಬಂತು. ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.


ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳುವದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವದು ಮತ್ತೂ ನಿಶ್ಚಯವಲ್ಲವೇ.


ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,


ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ಹೆಚ್ಚುಕಡಿಮೆ ಉಂಟು. ಹೇಗಂದರೆ ಆ ಒಬ್ಬನ ಅಪರಾಧದಿಂದ ಎಲ್ಲಾ ಮನುಷ್ಯರು ಸತ್ತದ್ದು ನಿಶ್ಚಯವಾಗಿರಲಾಗಿ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಎಲ್ಲಾ ಮನುಷ್ಯರಿಗೆ ಹೇರಳವಾಗಿ ಸಿದ್ಧವಾಗಿರುವದು ಮತ್ತೂ ನಿಶ್ಚಯವಲ್ಲವೇ.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು