Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:58 - ಕನ್ನಡ ಸತ್ಯವೇದವು J.V. (BSI)

58 ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ತೆಚೆಸಾಟ್ನಿ ಮಾಜ್ಯಾ ಪ್ರೆಮಾಚ್ಯಾ ಭಾವಾನು ಅನಿ ಭೆನಿಯಾನು ಘಟ್ ರ್‍ಹಾವಾ, ಗೊಂದ್ಳುನಕಾಶಿ, ಸಗ್ಳ್ಯಾ ಎಳಾರ್ ಧನಿಯಾಚ್ಯಾ ಕಾಮಾತ್ ಮಗ್ನ್ ಹೊವ್ನ್ ರ್‍ಹಾವಾ. ಧನಿಯಾಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವ್ನ್, ತುಮಿ ರಾಬಲ್ಲಿ ರಾಬ್ನುಕ್ ಕನ್ನಾಬಿ ಬೆಕಾರ್ ಹೊಯ್ನಾ ಮನುನ್ ಕಳ್ವುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:58
42 ತಿಳಿವುಗಳ ಹೋಲಿಕೆ  

ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು ಎಂದು ಹೇಳಿದನು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು.


ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ. ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ತಿಮೊಥೆಯನು ಬಂದರೆ ಅವನು ನಿಮ್ಮ ಬಳಿಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಕರ್ತನ ಕೆಲಸವನ್ನು ನಡಿಸುತ್ತಾನೆ;


ನಿಮ್ಮಲ್ಲಿ ನಮ್ಮ ಪ್ರೀತಿಯು ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರೊಬ್ಬರ ಮೇಲೆಯೂ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿಹೊಂದಿ ಅತ್ಯಧಿಕವಾಗುವಂತೆ ಕರ್ತನು ಅನುಗ್ರಹಿಸಲಿ.


ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.


ಅವನು ಎಂದೂ ಕದಲುವದಿಲ್ಲ; ನೀತಿವಂತನನ್ನು ಯಾವಾಗಲೂ ನೆನಸುವರು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮವಾಗಿ ನಡೆಯುವದನ್ನೂ ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.


ಮೊದಲಿಂದಿರುವ ಭರವಸವನ್ನು ಅಂತ್ಯದವರೆಗೂ ದೃಢವಾಗಿ ಹಿಡಿದುಕೊಳ್ಳುವ ಪಕ್ಷಕ್ಕೆ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವಲ್ಲಾ!


ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ಮತ್ತು ನಾನು ದೇವರನ್ನು ಪ್ರಾರ್ಥಿಸಿ -


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ಅವುಗಳ ಮೂಲಕ ನಿನ್ನ ದಾಸನಿಗೆ ಎಚ್ಚರಿಕೆಯಾಗುತ್ತದೆ; ಅವುಗಳನ್ನು ಕೈಕೊಳ್ಳುವದರಿಂದ ಬಹಳ ಫಲ ಉಂಟಾಗುತ್ತದೆ.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವದಿಲ್ಲ; ನಿಮ್ಮ ಆತ್ಮಕ್ಕೆ ಆದಾಯವಾಗುವಂಥ ಪ್ರೀತಿಫಲವನ್ನೇ ಅಪೇಕ್ಷಿಸುತ್ತೇನೆ. ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಯಾಯಿತು.


ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ಭಯಪಡುತ್ತೇನೆ.


ಆಕೆಯು ತನ್ನ ಜೊತೆಯಲ್ಲಿ ಬರುವದಕ್ಕೆ ದೃಢಮಾಡಿಕೊಂಡಿದ್ದಾಳೆಂದು ನೊವೊವಿುಯು ತಿಳಿದು ಸುಮ್ಮನಾದಳು.


ಆದದರಿಂದ ನಾನು ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವದಕ್ಕೆ ಅವನನ್ನು ಕಳುಹಿಸಿದೆನು.


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡದ್ದೂ ಶುದ್ಧತ್ವದಲ್ಲಿ ಕೈತೊಳಕೊಂಡದ್ದೂ ವ್ಯರ್ಥವೇ ಸರಿ.


ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಕೊಳ್ಳಲಿಲ್ಲ.


ನೀತಿ ಕೃಪೆಗಳನ್ನು ಹುಡುಕುವವನು ನೀತಿ ಜೀವಕೀರ್ತಿಗಳನ್ನು ಪಡೆಯುವನು.


ಅವರು ನಾಲ್ಕು ಸಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರಕೊಟ್ಟೆನು.


ಆತನು ಕೈಬತ್ತಿದ್ದವನಿಗೆ - ಎದ್ದು ನಡುವೆ ಬಾ ಎಂದು ಹೇಳಿ ಅವರಿಗೆ -


ಅವನು ಇವನಿಗೆ - ನೀನು ಸಹ ಐದು ಗ್ರಾಮಗಳ ಮೇಲಿರು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು