Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:1 - ಕನ್ನಡ ಸತ್ಯವೇದವು J.V. (BSI)

1 ದೇವಜನರಿಗೋಸ್ಕರ ಹಣ ವಸೂಲುಮಾಡುವದನ್ನು ಕುರಿತು ನಾನು ಹೇಳುವದೇನಂದರೆ, ಗಲಾತ್ಯದ ಸಭೆಗಳಿಗೆ ನಾನು ಹೇಳಿಕೊಟ್ಟ ಕ್ರಮದಂತೆ ನೀವೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಹೇಳುವುದಾದರೆ: ಗಲಾತ್ಯದ ಸಭೆಗಳಿಗೆ ನಾನು ಕೊಟ್ಟ ನಿಯಮವನ್ನೇ ನೀವೂ ಅನುಸರಿಸಿರಿ. ನಾನು ಬಂದಾಗ ಹಣ ಸಂಗ್ರಹಿಸುವ ಅವಶ್ಯಕತೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಈಗ ನಾನು ಬರೆಯುತ್ತೇನೆ. ನಾನು ಗಲಾತ್ಯ ಸಭೆಗಳಿಗೆ ಹೇಳಿಕೊಟ್ಟಂತೆ ನೀವೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚ್ಯಾ ಲೊಕಾಂಚ್ಯಾಸಾಟ್ನಿ ಪೈಸೆ ಗೊಳಾ ಕರ್‍ತಲ್ಯಾ ವಿಶಯಾತ್ ಗಾಲಾತಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಮಿಯಾ ಸಾಂಗಟಲ್ಲೊ, ತೆ ತುಮಿಬಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:1
20 ತಿಳಿವುಗಳ ಹೋಲಿಕೆ  

ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ?


ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ.


ಆದರೆ ನೀವು ನಮ್ಮಲ್ಲಿರುವ ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.


ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹ ಉಂಟಾದದರಿಂದ ನಿನ್ನ ಪ್ರೀತಿಯ ನಿವಿುತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.


ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತೂ ಕೇಳಿದ್ದರಿಂದ


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ


ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವದೇನಂದರೆ -


ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರೂಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;


ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ; ನೀವು ಕೂಡಿ ಬಂದದ್ದು ನ್ಯಾಯತೀರ್ಪಿಗೊಳಗಾಗುವದಕ್ಕೆ ಕಾರಣವಾಗಬಾರದು. ವಿುಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.


ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದೂ ಅವರು ದೇವಜನರಿಗೆ ಸೇವೆಮಾಡುವದಕ್ಕಾಗಿ ಕೈಹಾಕಿದರೆಂದೂ ನೀವು ಬಲ್ಲಿರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು