1 ಕೊರಿಂಥದವರಿಗೆ 16:19 - ಕನ್ನಡ ಸತ್ಯವೇದವು J.V. (BSI)19 ಆಸ್ಯಸೀಮೆಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಏಷ್ಯ ಸೀಮೆಯಲ್ಲಿರುವ ಧರ್ಮಸಭೆಗಳ ಸಹೋದರರು ನಿಮಗೆ ವಂದನೆಗಳನ್ನು ತಿಳಿಸಿರುತ್ತಾರೆ. ಅಕ್ವಿಲನು ಮತ್ತು ಪ್ರಿಸಿಲ್ಲಳು ಹಾಗೂ ಅವರ ಮನೆಯಲ್ಲಿ ಸಭೆ ಸೇರುವ ಎಲ್ಲರೂ ಪ್ರಭುವಿನ ಹೆಸರಿನಲ್ಲಿ ನಿಮಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಏಷ್ಯಾದ ಸಭೆಗಳವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಕ್ವಿಲನು ಮತ್ತು ಪ್ರಿಸ್ಕಿಲ್ಲಳು ಪ್ರಭುವಿನ ಹೆಸರಿನಲ್ಲಿ ನಿಮಗೆ ಬಹಳ ವಂದನೆಗಳನ್ನು ತಿಳಿಸಿದ್ದಾರೆ. ಅವರ ಮನೆಯಲ್ಲಿ ಸೇರಿಬರುವ ಸಭೆಯವರು ಸಹ ನಿಮಗೆ ವಂದನೆ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಏಷ್ಯಾದ ಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ನಿಮ್ಮನ್ನು ಹೃದಯಪೂರ್ವಕವಾಗಿ ವಂದಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅಸಿಯಾ ಪ್ರಾಂತ್ಯಾತ್ಲೆ ದೆವಾಚ್ಯಾ ಲೊಕಾಂಚೆ ತಾಂಡೆ ತುಮ್ಕಾ ನಮಸ್ಕಾರ್ ಕರ್ತಾತ್. ಅಕ್ವಿಲಾ, ಪ್ರಿಸ್ಕಾ ಅನಿ ತೆಂಚ್ಯಾ ಘರಾತ್ ಜಮ್ತಲೊ ದೆವಾಚ್ಯಾ ಲೊಕಾಂಚೊ ತಾಂಡೊ ಧನಿಯಾಚ್ಯಾ ಎಕ್ವಟ್ಟಾನ್ ತುಮ್ಕಾ ನಮಸ್ಕಾರ್ ಕರ್ತಾತ್. ಅಧ್ಯಾಯವನ್ನು ನೋಡಿ |