1 ಕೊರಿಂಥದವರಿಗೆ 2:10 - ಕನ್ನಡ ಸತ್ಯವೇದವು J.V. (BSI)10 ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ದೇವರು ತನ್ನ ಪವಿತ್ರಾತ್ಮನ ಮೂಲಕ ನಮಗೆ ಈ ಸಂಗತಿಗಳನ್ನು ಪ್ರಕಟಿಸಿದನು. ಪವಿತ್ರಾತ್ಮನು ಸಕಲವನ್ನೂ ದೇವರ ಅಗಾಧವಾದ ರಹಸ್ಯಗಳನ್ನೂ ತಿಳಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಖರೆ ದೆವಾನ್ ತೆಚ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಹಿ ಸಗ್ಳಿ ಸಂಗ್ತಿಯಾ ಅಮ್ಕಾ ಕಳ್ವುಲ್ಯಾನಾಯ್. ಪವಿತ್ರ್ ಆತ್ಮೊ ಸಗ್ಳಿ ವಿಶಯಾ, ದೆವಾಚಿ ಖೊಲಾತ್ ಹೊತ್ತಿ ಉದ್ದೆಸಾ ಸೈತ್ ಹುಡಕ್ತಾ. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.