Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:3 - ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ ಭಯಪಡುವವನೂ ಬಹು ನಡುಗುವವನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನಿಮ್ಮ ಬಳಿಗೆ ಬಂದಿದ್ದಾಗ ಬಲಹೀನನಾಗಿದ್ದೆನು; ಭಯದಿಂದ ನಡುಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚೆಸಾಟ್ನಿ ಮಿಯಾ ತುಮ್ಚ್ಯಾ ಮದ್ದಿ ಯೆಲ್ಲ್ಯಾ ತನ್ನಾ ಬಳ್ ನತ್ತೊ ಸರ್ಕೊ ಹೊತ್ತೊ ಅನಿ ಭಿಂಯಾನ್ ಘಾಬರಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:3
22 ತಿಳಿವುಗಳ ಹೋಲಿಕೆ  

ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷವಾಗಿದ್ದೇವೆ. ಇದಲ್ಲದೆ ನೀವು ಪೂರ್ಣಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ಅವನಿಂದ ಬಂದ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆ ಬಾರದ್ದು ಅನ್ನುತ್ತಾರೆ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ


ಆದದರಿಂದ ನಾವು ಧೈರ್ಯಗೆಡುವದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಆಂತರ್ಯವು ದಿನೇದಿನೇ ಹೊಸದಾಗುತ್ತಾ ಬರುತ್ತದೆ.


ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ.


ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು -


ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಮನಸ್ಸಿಗೆ ಏನೂ ಉಪಶಮನವಾಗಲಿಲ್ಲ, ಎಲ್ಲಾ ವಿಷಯಗಳಲ್ಲಿಯೂ ನಮಗೆ ಸಂಕಟವಿತ್ತು; ಹೊರಗೆ ಕಲಹ, ಒಳಗೆ ಭಯ.


ಮುಂದೆ ಅವರು ಮಾರ್ಗಹಿಡಿದು ಅಂಫಿಪೊಲಿ ಅಪೊಲೋನ್ಯ ಎಂಬ ಊರುಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರದೊಂದು ಸಭಾಮಂದಿರವಿತ್ತು.


ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ಆ ದಿನದಲ್ಲಿ ಐಗುಪ್ತವು ಹೆಣ್ಣಾಗಿ ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಕೈಬೀಸುವದರಿಂದ ಭಯಪಟ್ಟು ನಡುಗುವದು.


ನೀವು ಮನೋಭೀತಿಯಿಂದ ನಡುಗುವವರಾಗಿ ಅವನನ್ನು ಸೇರಿಸಿಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯು ತೋರಬಂತು. ಅವನು ಅದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಕನಿಕರವು ಹೆಚ್ಚಾಗಿದೆ.


ದಾಸತ್ವದಲ್ಲಿರುವವರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರ್ರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು