1 ಕೊರಿಂಥದವರಿಗೆ 2:7 - ಕನ್ನಡ ಸತ್ಯವೇದವು J.V. (BSI)7 ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವದಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇವಿುಸಿ ಇದುವರೆಗೆ ಮರೆಮಾಡಿದ ಜ್ಞಾನವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಮಿಯಾ ಪರ್‍ಚಾರ್ ಕರ್‍ತಲೆ ಹೆ ಶಾನ್‍ಪಾನ್ ದೆವಾಚೆ ಅನಿ ಗುಟಾನ್ ಥವಲ್ಲೆ, ತೆನಿ ಹ್ಯೊ ಜಗ್ ಕರುಚ್ಯಾ ಅದ್ದಿಚ್ ಅಮ್ಚ್ಯಾ ಮಹಿಮೆಸಾಟ್ನಿ ಅದ್ದಿಚ್ ಎಚುನ್ ಕಾಡಲ್ಲೆ ಹಾಯ್. ಅಧ್ಯಾಯವನ್ನು ನೋಡಿ |