Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:8 - ಕನ್ನಡ ಸತ್ಯವೇದವು J.V. (BSI)

8 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹ್ಯಾ ಕಾಲಾಚ್ಯಾ ಖಲ್ಯಾಬಿ ಅದಿಕಾರ್‍ಯಾಕ್ನಿ ಹೆಚ್ಯಾ ವಿಶಯಾತ್ ಕಳುಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೆಂಕಾ ಹೆ ಕಳಲ್ಲೆ ರ್‍ಹಾಲ್ಯಾರ್ ತೆನಿ ಮಹಿಮೆಚ್ಯಾ ಧನಿಯಾಕ್ ಕುರ್ಸಾರ್ ಮಾರಿನಸಿ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:8
22 ತಿಳಿವುಗಳ ಹೋಲಿಕೆ  

ನನ್ನ ಸಹೋದರರೇ, ಪ್ರಭಾವವುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ಯೆರೂಸಲೇವಿುನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಆತನನ್ನಾಗಲಿ ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲಿ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು


ಆದರೂ ಪ್ರವೀಣರಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಇಲ್ಲದೆ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವದರಿಂದ ಇಂಥದನ್ನು ನಿಮಗೆ ಮಾಡುವರು.


ಅವರು - ನಿನ್ನ ತಂದೆ ಎಲ್ಲಿದ್ದಾನೆ? ಎಂದು ಕೇಳಲು ಯೇಸು - ನೀವು ನನ್ನನ್ನೂ ತಿಳಿದಿಲ್ಲ, ನನ್ನ ತಂದೆಯನ್ನೂ ತಿಳಿದಿಲ್ಲ; ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ತಿಳಿದಿರುವಿರಿ ಅಂದನು.


ಹಿರೀಸಭೆಯವರಲ್ಲಿಯಾಗಲಿ ಫರಿಸಾಯರಲ್ಲಿಯಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು