Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:15 - ಕನ್ನಡ ಸತ್ಯವೇದವು J.V. (BSI)

15 ಒಬ್ಬನು ಕಟ್ಟಿದ್ದು ಸುಟ್ಟುಹೋದರೆ ಅವನಿಗೆ ಸಂಬಳವು ನಷ್ಟವಾಗುವದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸುಟ್ಟುಹೋದರೆ ಅವನಿಗೇ ನಷ್ಟವಾಗುತ್ತದೆ. ಅವನಾದರೋ ಬೆಂಕಿಯಿಂದ ತಪ್ಪಿಸಿಕೊಂಡವನ ಹಾಗೆ ರಕ್ಷಣೆಯನ್ನು ಹೊಂದುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಕಟ್ಟಡವು ಸುಟ್ಟುಹೋದರೆ, ಕಟ್ಟಿದವನಿಗೆ ನಷ್ಟವಾಗುವುದು. ಅವನು ರಕ್ಷಣೆ ಹೊಂದುವನು, ಆದರೆ ಅವನು ಬೆಂಕಿಯಿಂದ ತಪ್ಪಿಸಿಕೊಂಡವನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ, ಅವನಿಗೆ ನಷ್ಟವಾಗುವುದು, ಅವನಾದರೋ ರಕ್ಷಣೆಹೊಂದುವನು. ಆದರೆ ಬೆಂಕಿಯ ಜ್ವಾಲೆಗಳಿಂದ ತಪ್ಪಿಸಿಕೊಂಡವನ ಹಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಜೆ ಕೊನಾಚೆ ಕಾಮ್ ಜಳುನ್ ಜಾತಾ, ತೆಕಾ ಲುಕ್ಷಾನ್ ಹೊತಾ. ಜಾಲ್ಯಾರ್ ಬಿ ಆಗಿತ್ನಾ ವಾಚುನ್ ಯೆಲ್ಲ್ಯಾ ಸಾರ್ಕೆ ತೊ ಹುರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:15
12 ತಿಳಿವುಗಳ ಹೋಲಿಕೆ  

ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಅವರನ್ನು ಬೆಂಕಿಯ ಬಾಯೊಳಗಿಂದ ಎಳಕೊಂಡು ರಕ್ಷಿಸಿರಿ. ಕೆಲವರನ್ನು ಭಯಯುಕ್ತರಾಗಿ ಕರುಣಿಸಿರಿ; ಹೊಲಸು ನಡತೆಯಿಂದ ಮೈಲಿಗೆಯಾದ ಅವರ ಅಂಗಿಯನ್ನೂ ಅಸಹ್ಯಿಸಿರಿ.


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಹೇಗೆ?


ಆಗ ಯೆಹೋವನ ದೂತನು ಸೈತಾನನಿಗೆ - ಸೈತಾನನೇ, ಯೆಹೋವನು ನಿನ್ನನ್ನು ಖಂಡಿಸಲಿ, ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ ಎಂದು ಹೇಳಿದನು.


ಮನುಷ್ಯರು ನಮ್ಮ ತಲೆಗಳ ಮೇಲೆಯೇ ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ಪಾರುಗಾಣಿಸಿದ್ದೀ.


ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು - ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.


ವಿುಕ್ಕಾದವರಲ್ಲಿ ಕೆಲವರು ಹಲಿಗೆಗಳ ಮೇಲೆ ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು