Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:17 - ಕನ್ನಡ ಸತ್ಯವೇದವು J.V. (BSI)

17 ಯಾವನಾದರೂ ದೇವರ ಆಲಯವನ್ನು ಕೆಡಿಸಿದರೆ ದೇವರು ಅವನನ್ನು ಕೆಡಿಸುವನು. ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯಾರಾದರೂ ದೇವರ ಆಲಯವನ್ನು ನಾಶಪಡಿಸಿದರೆ, ದೇವರು ಅವರನ್ನು ನಾಶಪಡಿಸುವರು. ಏಕೆಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆ ಕೊನ್ ದೆವಾಚಿ ಗುಡಿ ನಾಸ್ ಕರ್‍ತಾ ತ್ಯಾ ಮಾನ್ಸಾಕ್ ದೆವ್ ನಾಸ್ ಕರ್‍ತಾ, ಕಶ್ಯಾಕ್ ಮಟ್ಲ್ಯಾರ್ ದೆವಾಚಿ ಗುಡಿ ಪವಿತ್ರ್ ಅನಿ ತುಮಿ ಹಿ ಗುಡಿ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:17
19 ತಿಳಿವುಗಳ ಹೋಲಿಕೆ  

ಇದೇ ದೇವಸ್ಥಾನದ ನಿಯಮ; ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲಾ ಸುತ್ತುಮುತ್ತಲು ಅತಿ ಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮವು ಇದೇ.


ನಾನು ಅವರ ಕಡೆಯಿಂದ ನನ್ನ ಮುಖವನ್ನು ಓರೆಮಾಡಲು ನನ್ನ ಇಷ್ಟಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸು ಮಾಡುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ಅಶುದ್ಧನಾಗಿ ದೋಷಪರಿಹಾರಮಾಡಿಕೊಳ್ಳದವನು ಯೆಹೋವನ ದೇವಸ್ಥಾನವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.


ದೇವರೇ, ಮ್ಲೇಚ್ಫರು ನಿನ್ನ ಸ್ವಾಸ್ತ್ಯವನ್ನು ಹೊಕ್ಕು ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳಾಗಿ ಮಾಡಿಬಿಟ್ಟರು.


ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ನಮ್ಮ ಪಿತೃಗಳು ನಿನ್ನನ್ನು ಕೀರ್ತಿಸುತ್ತಿದ್ದ ನಮ್ಮ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯವಸ್ತುಗಳೆಲ್ಲಾ ನಾಶವಾಗಿವೆ.


ಇಸ್ರಾಯೇಲ್ಯರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.


ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು.


ಅದು ನನಗೆ ತಿಳಿಯದೆ ಹೋಯಿತು ಅಂದುಕೊಂಡು ಭಯಪಟ್ಟವನಾಗಿ - ಈ ಸ್ಥಳವು ಎಷ್ಟೋ ಭಯಂಕರವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದು ಪರಲೋಕದ ಬಾಗಿಲು ಎಂದು ಹೇಳಿದನು.


ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವದೇವರು ಪರಿಶುದ್ಧನು.


ಯೆಹೋವನೇ, ನಿನ್ನ ಆಜ್ಞೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.


ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೋಸ್ಕರ ನನ್ನ ಸ್ವಂತ ಸೊತ್ತಿನಿಂದ


ಅದರ ಪ್ರವಾದಿಗಳು ಬಡಾಯಿಗಾರರು, ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ಬಿಜಯಮಾಡು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡಿಸಿಬಿಟ್ಟಿದ್ದಾನೆ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ. ತಾನು ನಿಮ್ಮಲ್ಲಿ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವವನು ಜ್ಞಾನಿಯಾಗುವಂತೆ ಹುಚ್ಚನಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು