Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:3 - ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ಇನ್ನೂ ಶರೀರಾಧೀನಸ್ವಭಾವವುಳ್ಳವರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು ಜಗಳಗಳು ಇರುವಲ್ಲಿ ನೀವು ಶರೀರಾಧೀನಸ್ವಭಾವವುಳ್ಳವರಾಗಿದ್ದು ಕೇವಲ ನರಪ್ರಾಣಿಗಳಂತೆ ನಡೆಯುತ್ತೀರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮಿ ಅಜುನ್ ಬಿ ಹ್ಯಾ ಜಗಾತ್ಲ್ಯಾ ಲೊಕಾಂಚ್ಯಾ ಸಾರ್ಕೆ ಹಾಸಿ, ಕಶ್ಯಾಕ್ ಮಟ್ಲ್ಯಾರ್ ಅಜುನ್ ತುಮ್ಚೆ ಮದ್ದಿ ಕುಸ್ಡೆಪಾನ್ ಅನಿ ಝಗ್ಡೆ ಹಾತ್ ಅಶೆ ರ್‍ಹಾತಾನಾ, ತುಮಿ ಹ್ಯಾ ಜಗಾತ್ ಹೊತ್ತ್ಯಾ ಲೊಕಾಂಚ್ಯಾ ಸಾರ್ಕೆ ಹೊಯ್ ನ್ಹಯ್? ಸಾದಾರನ್ ಮಾನ್ಸಾಂಚ್ಯಾ ಬಾಸೆನ್ ಜಿವನ್ ಕರಿನಾ ಹೊಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:3
17 ತಿಳಿವುಗಳ ಹೋಲಿಕೆ  

ಮತ್ಸರವೂ ಪಕ್ಷಭೇದವೂ ಇರುವ ಕಡೆ ಗಲಿಬಿಲಿಯೂ ಸಕಲವಿಧ ನೀಚಕೃತ್ಯಗಳೂ ಇರುವವು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ಹರಕೊಂಡು ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ನೋಡಿರಿ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು.


ಹೇಗಂದರೆ ಮೊದಲನೇದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಮತ್ತು ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.


ಯಾಕಂದರೆ ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದು ಬಂತು.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು.


ಅವರು ಪ್ರಾಪಂಚಿಕರಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಒಬ್ಬನು - ನಾನು ಪೌಲನವನು ಎಂದು ಮತ್ತೊಬ್ಬನು - ನಾನು ಅಪೊಲ್ಲೋಸನವನು ಎಂದು ಹೇಳುತ್ತಿರುವಾಗ ನೀವು ಕೇವಲ ನರಪ್ರಾಣಿಗಳಾಗಿದ್ದೀರಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು