1 ಕೊರಿಂಥದವರಿಗೆ 3:5 - ಕನ್ನಡ ಸತ್ಯವೇದವು J.V. (BSI)5 ಹಾಗಾದರೆ ಅಪೊಲ್ಲೋಸನು ಏನು? ಪೌಲನು ಏನು? ಅವರು ಸೇವಕರು; ಅವರ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅಶೆ ರ್‍ಹಾತಾನಾ ಅಪೊಲ್ಲೊ ಕೊನ್? ಪಾವ್ಲು ಕೊನ್? ಅಮಿ ಖಾಲಿ ದೆವಾಚಿ ಸೆವಕಾ, ತೆಚ್ಯಾಚ್ ವೈನಾ ತುಮಿ ವಿಶ್ವಾಸಾಕ್ ಯೆಲ್ಯಾಶಿ ಅಮಿ ಹರಿ ಎಕ್ಲೊ ಧನಿಯಾನ್ ಅಮ್ಕಾ ದಿಲ್ಲೆ ಕಾಮ್ ಕರ್ತಾಂವ್. ಅಧ್ಯಾಯವನ್ನು ನೋಡಿ |
ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಮೊದಲು ದೂಷಕನೂ ಹಿಂಸಕನೂ ಬಲಾತ್ಕಾರಿಯೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ ತನ್ನ ಸೇವೆಗೆ ನೇವಿುಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು;