Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:6 - ಕನ್ನಡ ಸತ್ಯವೇದವು J.V. (BSI)

6 ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋಸನು ನೀರು ಹೊಯಿದನು, ಆದರೆ ಬೆಳೆಸುತ್ತಾ ಬಂದವನು ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಬೀಜವನ್ನು ಬಿತ್ತಿದೆನು, ಅಪೊಲ್ಲೋಸನು ನೀರು ಹಾಕಿದನು, ಆದರೆ ಬೆಳೆಸಿದವರು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ಭಿಂಯ್ ಪೆರ್‍ಲೊ ಅಪೊಲ್ಲೊನ್ ಪಾನಿ ವೊತ್ಲ್ಯಾನ್, ಖರೆ ತೆ ವಾಡಿ ಸರ್ಕೆ ಕರಲ್ಲೆ ದೆವಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:6
29 ತಿಳಿವುಗಳ ಹೋಲಿಕೆ  

ಉದಾರಿಯು ಪುಷ್ಟನಾಗುವನು; ನೀರು ಹಾಯಿಸುವವನಿಗೆ ನೀರು ಸಿಕ್ಕುವದು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ನಾನು ಸ್ವತಂತ್ರನಲ್ಲವೇ. ಅಪೊಸ್ತಲನಲ್ಲವೇ ನಮ್ಮ ಕರ್ತನಾದ ಯೇಸುವನ್ನು ಕಂಡವನಲ್ಲವೇ. ನಾನು ಕರ್ತನ ಸೇವೆಯಲ್ಲಿ ಮಾಡಿದ ಕೆಲಸದ ಫಲವು ನೀವೇ ಅಲ್ಲವೇ.


ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವದಕ್ಕಾಗಿ ನನ್ನ ಕೈಯಿಂದ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಸೂಚಕಕಾರ್ಯ ಅದ್ಭುತಕಾರ್ಯಗಳ ಬಲದಿಂದಲೂ ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವದಕ್ಕೆ ನನಗೆ ಧೈರ್ಯಸಾಲದು.


ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.


ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಶಾಸ್ತ್ರಗಳಲ್ಲಿ ಪ್ರವೀಣನು.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರವರ್ಣದ ವಸ್ತ್ರಗಳನ್ನು ಮಾರುವವಳೂ ಥುವತೈರ ಎಂಬ ಊರಿನವಳೂ ದೇವಭಕ್ತಳೂ ಆಗಿದ್ದಳು. ಪೌಲನು ಹೇಳಿದ ಮಾತುಗಳಿಗೆ ಲಕ್ಷ್ಯಕೊಡುವದಕ್ಕೆ ಕರ್ತನು ಆಕೆಯ ಹೃದಯವನ್ನು ತೆರೆದನು.


ಯೆಹೋವನು ಮನೇ ಕಟ್ಟದಿದ್ದರೆ ಅದನ್ನು ಕಟ್ಟುವವರು ಕಷ್ಟಪಡುವದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ ಕಾವಲುಗಾರರು ಅದನ್ನು ಕಾಯುವದು ವ್ಯರ್ಥ.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು.


ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ಹೀಗಿರಲಾಗಿ ನೆಡುವವನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.


ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ, ಲೋಕವಾಗಲಿ ಜೀವವಾಗಲಿ ಮರಣವಾಗಲಿ, ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ;


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು