Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:14 - ಕನ್ನಡ ಸತ್ಯವೇದವು J.V. (BSI)

14 ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿಲ್ಲ. ಆದರೆ ನೀವು ನನ್ನ ಪ್ರಿಯ ಮಕ್ಕಳಾಗಿರುವುದರಿಂದ ನಿಮ್ಮನ್ನು ಎಚ್ಚರಿಸುವುದಕ್ಕಾಗಿ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ, ನನ್ನ ಪ್ರಿಯ ಮಕ್ಕಳೆಂದು ನಿಮಗೆ ಬುದ್ಧಿ ಹೇಳುತ್ತೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಕಾ ಲಜ್ಜ್ಯಾ ಕರಿಸರ್ಕೆ ಕರುಚೆ ಮನುನ್ ನ್ಹಯ್, ತುಮ್ಕಾ ಮಾಜ್ಯಾ ಪ್ರೆಮಾಚ್ಯಾ ಪೊರಾಕ್ನಿ ಬುದ್‍ಬಾಳ್ ಸಾಂಗುಸಾಟ್ನಿ ಮಿಯಾ ಹೆ ಲಿವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:14
19 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ಧಿಹೇಳುತ್ತಾ ಧೈರ್ಯಪಡಿಸುತ್ತಾ


ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.


ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ನಡಿಸಲಿಲ್ಲ; ನನ್ನ ವಿಷಯದಲ್ಲಿಯೂ ಹೀಗಾಗಬೇಕೆಂದು ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಅದಕ್ಕಿಂತ ಸಾಯುವದೇ ನನಗೆ ಲೇಸು. ಹೊಗಳಿಕೊಳ್ಳುವದಕ್ಕೆ ನನಗಿರುವ ಈ ಆಸ್ಪದವನ್ನು ಯಾರೂ ತೆಗೆದುಬಿಡಬಾರದು.


ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹುಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುವವರೆಂದು ನೆನಸುತ್ತೀರೋ? ನಿಮ್ಮ ಮುಂದೆಯಲ್ಲ, ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತಾಡುವವರಾಗಿದ್ದೇವೆ. ಪ್ರಿಯರೇ, ನಾವು ಮಾತಾಡುವದೆಲ್ಲಾ ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಆಗಿದೆ.


ಯಾಕೆ ನಿವ್ಮಿುಂದ ಏನೂ ತೆಗೆದುಕೊಳ್ಳುವದಿಲ್ಲ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲ.


ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ. ಕೂಡಾ ಸಾಯುವದಕ್ಕೂ ಕೂಡಾ ಬದುಕುವದಕ್ಕೂ ನೀವು ನಮ್ಮ ಹೃದಯದಲ್ಲಿದ್ದೀರೆಂದು ಮೊದಲೇ ಹೇಳಿದ್ದೇನಲ್ಲಾ.


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


ನಿಮ್ಮಲ್ಲಿ ನಾಚಿಕೆ ಹುಟ್ಟಿಸುವದಕ್ಕೆ ಇದನ್ನು ಹೇಳುತ್ತೇನೆ. ಏನು, ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಜಾಣನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.


ನೀನು ಶಿಷ್ಟನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆಹೋದರೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.


ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತು ಇಟ್ಟುಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.


ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.


ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು