1 ಕೊರಿಂಥದವರಿಗೆ 4:15 - ಕನ್ನಡ ಸತ್ಯವೇದವು J.V. (BSI)15 ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹುಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತುಮ್ಕಾ ಕ್ರಿಸ್ತಾಚ್ಯಾ ವೈನಾ ಹಜಾರಾನಿ ಶಿಕ್ವುತಲಿ ಲೊಕಾ ಅಸ್ತಿಲ್, ಹೊಲ್ಯಾರ್ಬಿ ತುಮ್ಕಾ ಆತ್ಮಿಕ್ ಬಾಬಾ ಎಕ್ಲೊಚ್, ಮಿಯಾಚ್ ತೊ ತುಮ್ಕಾ ಬರಿ ಖಬರ್ ಪ್ರಚಾರ್ ಕರುನ್ ಕ್ರಿಸ್ತಾತ್ ತುಮ್ಕಾ ಜಲಮ್ ದಿಲ್ಲೊ. ಅಧ್ಯಾಯವನ್ನು ನೋಡಿ |