1 ಕೊರಿಂಥದವರಿಗೆ 4:17 - ಕನ್ನಡ ಸತ್ಯವೇದವು J.V. (BSI)17 ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದಕಾರಣವೇ, ನಾನು ನಿಮ್ಮ ಬಳಿಗೆ ತಿಮೊಥೆಯನನ್ನು ಕಳುಹಿಸುತ್ತಿದ್ದೇನೆ, ಅವನು ಪ್ರಭುವಿನಲ್ಲಿ ನನ್ನ ಮಗನಾಗಿದ್ದಾನೆ. ನಾನು ಅವನನ್ನು ಪ್ರೀತಿಸುತ್ತೇನೆ. ಅವನು ನಂಬಿಗಸ್ತನಾಗಿದ್ದಾನೆ. ನಾನು ಕ್ರಿಸ್ತ ಯೇಸುವಿನಲ್ಲಿ ಜೀವಿಸುವ ರೀತಿಯನ್ನು ಅವನು ನಿಮ್ಮ ಜ್ಞಾಪಕಕ್ಕೆ ತರುವನು. ಪ್ರತಿಯೊಂದು ಕಡೆಯಲ್ಲಿಯೂ ಎಲ್ಲಾ ಸಭೆಗಳಲ್ಲಿಯೂ ನಾನು ಅದೇ ರೀತಿಯ ಜೀವನವನ್ನು ಉಪದೇಶಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದರ ನಿಮಿತ್ತವೇ ಕರ್ತ ದೇವರಲ್ಲಿ ನಂಬಿಗಸ್ತನಾಗಿರುವ ನನ್ನ ಮಗ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನಾಗಿದ್ದಾನೆ. ನಾನು ಎಲ್ಲಾ ಕಡೆಗಳಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವುದರ ಪ್ರಕಾರ, ಅವನು ಕ್ರಿಸ್ತ ಯೇಸುವಿನಲ್ಲಿರುವ ನನ್ನ ನಡವಳಿಕೆಯನ್ನು, ನಿಮ್ಮ ನೆನಪಿಗೆ ತರುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಹ್ಯಾಚ್ ಕಾರನಾಸಾಟ್ನಿ ಮಿಯಾ ತಿಮೊತಿಕ್ ತುಮ್ಚ್ಯಾ ಕಡೆ ಧಾಡ್ಲಾ, ತೊ ಧನಿಯಾತ್ ಮಾಜೊ ಪ್ರೆಮಾಚೊ ಅನಿ ವಿಶ್ವಾಸಾಚೊ ಲೆಕ್ ಸಾರ್ಕೊ ಹಾಯ್, ಜೆಜು ಕ್ರಿಸ್ತಾತ್ ಮಿಯಾ ಚಲುನ್ ಹಾಂವ್ ಅನಿ ಸಗ್ಳ್ಯಾಕ್ಡೆ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ನಿ ಮಿಯಾ ಶಿಕ್ವುನ್, ದಾಕ್ವುತಾ ತಿ ವಾಟ್ ತೊ ತುಮ್ಕಾ ಯಾದ್ ಕರುನ್ ದಿತಾ. ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.