Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:20 - ಕನ್ನಡ ಸತ್ಯವೇದವು J.V. (BSI)

20 ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಶಕ್ತಿಯಲ್ಲಿಯೇ ಆಧಾರಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೇವರ ಸಾಮ್ರಾಜ್ಯ ಮರುಳು ಮಾತಲ್ಲ, ಶಕ್ತಿಯ ಸಾಧನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಏಕೆಂದರೆ ದೇವರ ರಾಜ್ಯವು ಕೇವಲ ಮಾತಲ್ಲ, ಅದು ಶಕ್ತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕಶ್ಯಾಕ್ ಮಟ್ಲ್ಯಾರ್ ದೆವಾಚೆ ರಾಜ್ ಬೊಲ್ತಲ್ಯಾತ್ ನ್ಹಯ್, ತಾಕ್ತಿಚ್ಯಾ ಕಾಮಾತ್ನಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:20
8 ತಿಳಿವುಗಳ ಹೋಲಿಕೆ  

ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.


ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾಚಿಕೆಪಡುವದಕ್ಕೆ ಕಾರಣವಾಗುವದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವದಕ್ಕಲ್ಲ ಕಟ್ಟುವದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು