1 ಕೊರಿಂಥದವರಿಗೆ 4:4 - ಕನ್ನಡ ಸತ್ಯವೇದವು J.V. (BSI)4 ನನ್ನಲ್ಲಿ ದೋಷವಿದೆಯೆಂದು ನನ್ನ ಬುದ್ಧಿಗೆ ತೋರುವದಿಲ್ಲವಾದರೂ ದೋಷವಿಲ್ಲದವನೆಂಬ ನಿರ್ಣಯವು ಇದರಿಂದಾಗುವದಿಲ್ಲ; ನನ್ನನ್ನು ವಿಚಾರಣೆಮಾಡುವವನು ಕರ್ತನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಮನಸ್ಸಾಕ್ಷಿಯು ಶುದ್ಧವಾಗಿದೆ. ಆದರೆ ಅದು ನನ್ನನ್ನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯತೀರಿಸುವವರು ಕರ್ತದೇವರೇ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಮಾಜೊ ಭುತ್ತುರ್‍ಲೊ ಮನ್ ಮಾಜ್ಯಾ ವೈರ್ ಚುಕ್ ವಾವಿನಾ, ಹೆ ಖರೆ ಜಾಲ್ಯಾರ್ಬಿ ಮಿಯಾ ಚುಕ್ ನಸ್ತಾನಾ ಹಾಂವ್ ಮನುಕ್ ಹೊಯ್ನಾ. ಮಾಜಿ ಝಡ್ತಿ ಕರ್‍ತಲೊ ಎಕ್ಲೊಚ್ ತೊ ಧನಿ. ಅಧ್ಯಾಯವನ್ನು ನೋಡಿ |
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.